ನೂರು ರೂಪಾಯಿ ಲಿಪ್‍ಸ್ಟಿಕ್ ಆಸೆಗೆ ಮೂರು ಲಕ್ಷ ಕಳೆದುಕೊಂಡ ಮಹಿಳೆ
ಬೆಂಗಳೂರು ಮೇ 13: ಆರ್ಥಿಕ ಸಂಕಷ್ಟದ ನಡುವೆ ಕಡಿಮೆ ಬೆಲೆಯಲ್ಲಿ ಯಾವುದಾದರು ವಸ್ತು ಸಿಗುತ್ತೆ ಅಂದ್ರೆ ಜನ ಮುಗಿಬಿದ್ದು ಖರೀದಿ ಮಾಡುತ್ತಾರೆ. ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡು ಕೆಲ ಮಂದಿ ಮೋಸದ ಸುಳಿಯಲ್ಲಿ ಜನರನ್ನು ಸಿಕ್ಕಿಬೀಳುವಂತೆ ಮಾಡುತ್ತಿದ್ದಾರೆ. ಇಂತಹದೊಂದು ಪ್ರಕರಣ ಸಿಲಿಕಾನ್ ಸಿಟಿಯಲ್ಲಿ ದಾಖಲಾಗಿದೆ.
ಹೌದು.. ಕಡಿಮೆ ಬೆಲೆಯಲ್ಲಿ ಲಿಪ್‌ಸ್ಟಿಕ್ ಖರೀದಿ ಮಾಡಲು ಮುಂದಾದ ಮಹಿಳೆಗೆ ಖದೀಮರು ಪಂಗನಾಮ ಹಾಕಿದ್ದಾರೆ. ರೂಪಾಯಿ ಲಿಪ್‍ಸ್ಟಿಕ್ ಆಸೆಗೆ ಬಿದ್ದ ಯುವತಿಯೊಬ್ಬರು ಬರೋಬ್ಬರಿ ಮೂರೂವರೆ ಲಕ್ಷ ಕಳೆದುಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳ ಬಳಿಯ ನಾಗೇನಹಳ್ಳಿ ಮಹಿಳೆಯೊಬ್ಬರಿಗೆ ಆನ್‍ಲೈನ್ ಡೆಲಿವರಿ ಕಂಪನಿಯಿಂದ ಕಾಲ್ ಮಾಡಿ ನೂರು ರೂಪಾಯಿ ಲಿಪ್‍ಸ್ಟಿಕ್ ಬುಕ್ ಮಾಡಿದ್ರೆ, ಲಕ್ಷಾಂತರ ರೂಪಾಯಿ ಬಹುಮಾನ ಗೆಲ್ಲಬಹುದು ಅಂತಾ ಮಹಿಳೆಯ ತಲೆಗೆ ತುಂಬಿದೆ.

ಇದನ್ನೇ ನಂಬಿದ ಮಹಿಳೆ ಲಿಪ್‌ಸ್ಟಿಕ್ ಆರ್ಡರ್ ಮಾಡಿದ್ದಾಳೆ. ಲಿಪ್‍ಸ್ಟಿಕ್ ಬುಕ್ ಮಾಡಿದ ಮಹಿಳೆಗೆ ಕೆಲ ನಿಮಿಷದಲ್ಲೇ ಆ ಕಡೆಯಿಂದ ಅಪರಿಚಿತ ಕಾಲ್ ಮಾಡಿ ಮೇಡಂ ನಿಮಗೆ ಒಂದು ಲ್ಯಾಪ್ ಟಾಪ್ ಮತ್ತು ಐಫೋನ್ ಬಂಪರ್ ಬಹುಮಾನ ಬಂದಿದೆ. ನಿಮಗೆ ಒಂದು ಲಿಂಕ್ ಕಳಿಸಿದ್ದೀನಿ ಅದನ್ನು ಓಕೆ ಮಾಡಿ ಅಂದಿದ್ದಾರೆ. ಅಷ್ಟೇ ತಾನೇ ಅಂತಾ ಮಹಿಳೆ ಆ ಲಿಂಕ್ ಓಕೆ ಮಾಡಿದ್ದಾಳೆ. ಅಷ್ಟೇ ಕ್ಷಣಮಾತ್ರದಲ್ಲೇ ಆ ಯುವತಿ ಅಕೌಂಟ್ ನಲ್ಲಿದ್ದ ಮೂರು ಲಕ್ಷದ ಮೂವತ್ತೆಂಟು ಸಾವಿರ ಡೆಬಿಟ್ ಆಗಿದೆ.

ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ವಿಚಾರಣೆ ನಡೆಯುತ್ತಿದೆ. ಹೀಗಾಗಿ ರೂಪಾಯಿ ಆಸೆಗೆ ಬಿದ್ದು ಅಧಿಕ ಹಣ ಕಳೆದುಕೊಳ್ಳುವಂತವರಿಗೆ ಇದೊಂದು ಪಾಠವಾಗಿದೆ. ಈಗಲಾದರೂ ಇಂತಹ ಖದೀಮರಿಂದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications