ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಕದ್ದುಮುಚ್ಚಿ ಧೂಮಪಾನ ಮಾಡಿದ ಯುವತಿ- ಅಪಾಯ ತಂದಿಟ್ಟಿದ್ದಕ್ಕೆ ಬಂಧನ
ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಮುಂದೇನಾಯ್ತು? ಈ ವರದಿ ಓದಿ
ಬೆಂಗಳೂರು, ಮಾರ್ಚ್ 08: ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ ಅವರು ಭಾನುವಾರ ತಡರಾತ್ರಿ ಇಂಡಿಗೋ ವಿಮಾನ ಸಂಖ್ಯೆ 6E 716 ರ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು. ವಿಮಾನವು ಕೋಲ್ಕತ್ತಾದಿಂದ ರಾತ್ರಿ 9.50 ಕ್ಕೆ ಹೊರಟು ಮೂರು ಗಂಟೆಗಳ ನಂತರ ಬೆಂಗಳೂರಿಗೆ ಬಂದಿಳಿಯಿತು.
ಪ್ರಿಯಾಂಕಾ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದಾಳೆ ಎಂದು ಶಂಕಿಸಿದ ವಿಮಾನ ಸಿಬ್ಬಂದಿ ಆಕೆಯನ್ನು ಬಾಗಿಲು ತೆರೆಯುವಂತೆ ಸೂಚಿಸಿದ್ದಾರೆ. ಶೌಚಾಲಯದ ಡಸ್ಟ್‌ಬಿನ್‌ನಲ್ಲಿ ಸಿಗರೇಟ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆ ಸಂದರ್ಭದಲ್ಲಿ ಸಿಬ್ಬಂದಿ ಡಸ್ಟ್‌ಬಿನ್‌ಗೆ ನೀರು ಸುರಿದರು ಮತ್ತು ಫ್ಲೈಟ್ ಕ್ಯಾಪ್ಟನ್ ಪ್ರಿಯಾಂಕಾ ಅವರನ್ನು 'ಅಶಿಸ್ತಿನ ಪ್ರಯಾಣಿಕ' ಎಂದು ಘೋಷಿಸಿದರು. ಇದು ನಡೆದಿದ್ದು ಮಧ್ಯರಾತ್ರಿಯ ಸುಮಾರಿಗೆ, ವಿಮಾನವು ಇಳಿಯುವ ಕೇವಲ 30 ನಿಮಿಷಗಳ ಮೊದಲು. ವಿಮಾನ ಲ್ಯಾಂಡ್ ಆದ ಕೂಡಲೇ ಸಿಬ್ಬಂದಿ ಪ್ರಿಯಾಂಕಾ ಅವರನ್ನು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಬಿಐಎಎಲ್‌ನ ಇಂಟರ್‌ಗ್ಲೋಬ್ ಏವಿಯೇಷನ್‌ನ ಭದ್ರತಾ ವಿಭಾಗದ ಸಹಾಯಕ ವ್ಯವಸ್ಥಾಪಕ ಶಂಕರ್ ಕೆ, ಆರೋಪಿಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯವನ್ನು ಎಸಗಿದ್ದಕ್ಕಾಗಿ ಪೊಲೀಸರು ಆಕೆಯನ್ನು ಬಂಧಿಸಿದ್ದಾಗಿ ಹೇಳಿದ್ದಾರೆ.

ಭಾರತೀಯ ವಿದ್ಯಾರ್ಥಿಯಿಂದ ಮೂತ್ರ ವಿಸರ್ಜನೆ
ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ್ದಕ್ಕಾಗಿ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕನ್ ಏರ್‌ಲೈನ್ಸ್ ನಿಷೇಧಿಸಿದೆ. ನ್ಯೂಯಾರ್ಕ್‌ನಿಂದ ನವದೆಹಲಿಗೆ ತೆರಳುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಭಾರತೀಯ ಪ್ರಯಾಣಿಕನೊಬ್ಬ ಶನಿವಾರ ಕುಡಿದ ಮತ್ತಿನಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು 21 ವರ್ಷದ ಆರ್ಯ ವೋಹ್ರಾ ಎಂದು ಗುರುತಿಸಲಾಗಿದೆ. ಆತ ಯುಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ವಿಮಾನಯಾನ ಸಂಸ್ಥೆಯು ಆತನ ಮೇಲೆ ನಿಷೇಧ ಹೇರಿದೆ.
ಅಮೇರಿಕನ್ ಏರ್‌ಲೈನ್ಸ್‌ನ ಹೇಳಿಕೆಯ ಪ್ರಕಾರ, ಜಾನ್ ಎಫ್. ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ AA292 ವಿಮಾನವು ಬಂದಿಳಿದಿದೆ. ರಾತ್ರಿ 9:50ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಭವಿಷ್ಯದಲ್ಲಿ ಪ್ರಯಾಣಿಕನನ್ನು ವಿಮಾನದಲ್ಲಿ ಅನುಮತಿಸುವುದಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ. 'ವಿಮಾನ ಆಗಮನದ ನಂತರ, ಪ್ರಯಾಣಿಕನು ಹೆಚ್ಚು ಕುಡಿದಿದ್ದನೆಂದು ತಿಳಿದುಬಂದಿದೆ. ಆತ ವಿಮಾನದಲ್ಲಿ ಸಿಬ್ಬಂದಿ ಸೂಚನೆಗಳಿಗೆ ಬದ್ಧವಾಗಿಲ್ಲ' ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
'ಆತ ಆಪರೇಟಿಂಗ್ ಸಿಬ್ಬಂದಿಯೊಂದಿಗೆ ಪದೇ ಪದೇ ವಾದಿಸುತ್ತಿದ್ದ. ಕುಳಿತುಕೊಳ್ಳಲು ಸಿದ್ಧನಿರಲಿಲ್ಲ. ಸಿಬ್ಬಂದಿ ಮತ್ತು ವಿಮಾನದ ಸುರಕ್ಷತೆಗೆ ನಿರಂತರವಾಗಿ ಅಪಾಯವನ್ನುಂಟು ಮಾಡಿದ್ದಾನೆ ಎಂದೂ ಆರೋಪಿಸಲಾಗಿದೆ. ಸಹ ಪ್ರಯಾಣಿಕರ ಸುರಕ್ಷತೆಗೆ ತೊಂದರೆಯಾದ ನಂತರ, ಅಂತಿಮವಾಗಿ 15G ನಲ್ಲಿ ಕುಳಿತಿದ್ದ ಪ್ಯಾಕ್ಸ್‌ನಲ್ಲಿ ಮೂತ್ರ ವಿಸರ್ಜಿಸಿದ್ದಾನೆ' ಎಂದು ಅಮೇರಿಕನ್ ಏರ್‌ಲೈನ್ಸ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದೆ.
ವಿಮಾನದಲ್ಲಿದ್ದ ಅಶಿಸ್ತಿನ ಪ್ರಯಾಣಿಕನ ಬಗ್ಗೆ ಅಮೆರಿಕನ್ ಏರ್‌ಲೈನ್ಸ್ ಪೈಲಟ್ ಆರೋಪ ದಾಖಲಿಸಿದ್ದಾರೆ. ವಿಮಾನ ಇಳಿಯುವ ಮೊದಲು ದೆಹಲಿ ಎಟಿಸಿಯನ್ನು ಸಂಪರ್ಕಿಸಿ ಭದ್ರತೆ ಕೋರಿದ್ದಾರೆ. ಅಗತ್ಯ ಕ್ರಮಕ್ಕಾಗಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ತಿಳಿಸಲಾಗಿದೆ. 'ವಿಮಾನದ ಲ್ಯಾಂಡಿಂಗ್ ನಂತರ, ಸಿಐಎಸ್ಎಫ್ ಸಿಬ್ಬಂದಿ ಆತನನ್ನು ವಿಮಾನದಿಂದ ಹೊರಗೆ ಕರೆದೊಯ್ದರು. ಪ್ರಯಾಣಿಕನು ಸಿಐಎಸ್ಎಫ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ' ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್ಐಗೆ ತಿಳಿಸಿದ್ದಾರೆ.
ವಿಮಾನ ನಿಲ್ದಾಣ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಯಾಣಿಕನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. 'ಅಮೆರಿಕನ್ ಏರ್‌ಲೈನ್ಸ್‌ನಿಂದ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆಯ ಬಗ್ಗೆ ನಾವು ದೂರು ಸ್ವೀಕರಿಸಿದ್ದೇವೆ. ಆತ ಯುಎಸ್‌ಎ ವಿದ್ಯಾರ್ಥಿ ಮತ್ತು ದೆಹಲಿಯ ಡಿಫೆನ್ಸ್ ಕಾಲೋನಿ ನಿವಾಸಿ. ಆರ್ಯ ವೋಹ್ರಾ ವಿರುದ್ಧ ನಾವು ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ' ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications