ಮಕ್ಕಳ ಪ್ರೇಮ ವಿವಾಹ, ಮನನೊಂದ ತಾಯಿ ಆತ್ಮಹತ್ಯೆ

ಬೆಂಗಳೂರು, ಅ. 6 : ಮಕ್ಕಳ ಪ್ರೇಮ ವಿವಾಹದಿಂದ ಮನನೊಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಭಾ ಎಂಬ ಮಹಿಳೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದರು.

ಮುರುಗೇಶ್ ಪಾಳ್ಯದಲ್ಲಿ ಗುಂಡು ಹಾರಿಸಿಕೊಂಡು ಪ್ರಭಾ (51) ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

gun

ವೆಂಕಟೇಶ್ ಮತ್ತು ಪ್ರಭಾ ದಂಪತಿಗೆ ಇಬ್ಬರು ಗಂಡು ಮಕ್ಕಳು. ಇವರಲ್ಲಿ ಕಿರಣ್ ನಾಲ್ಕು ವರ್ಷದ ಹಿಂದೆ ಪ್ರೇಮ ವಿವಾಹವಾಗಿದ್ದರು. ಮತ್ತೊಬ್ಬ ಮಗ ಗೌತಮ್ ಹತ್ತು ದಿನದ ಹಿಂದೆ ಪ್ರೇಮ ವಿವಾಹವಾಗಿದ್ದರು. ಇದರಿಂದ ಮನನೊಂದ ಪ್ರಭಾ ಅವರು ಮೂರು ದಿನಗಳ ಹಿಂದೆ ಮನೆಯಲ್ಲಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಪ್ರಭಾ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಕುಟುಂಬದವರಿಗೆ ಶವವನ್ನು ಹಸ್ತಾಂತರಿಸಲಾಗಿದೆ. ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. [ಗೃಹ ರಕ್ಷಕ ಸಿಬ್ಬಂದಿ ಕೊಲೆ]

ಭೀಕರ ಕೊಲೆ ಮೂವರ ಬಂಧನ : ಆಯುಧಪೂಜೆ ದಿನದಂದು 25 ವರ್ಷದ ಯುವಕನ ರುಂಡ-ಮುಂಡ ಹಾಗೂ ಕೈಗಳನ್ನು ಬೇರ್ಪಡಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಹತ್ಯೆ ಮಾಡಿದ ಬಳಿಕ ದೇಹದ ಒಂದು ಭಾಗವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ರಸ್ತೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+