ರೇಸ್ ಕೋರ್ಸ್ ರಸ್ತೆಯಲ್ಲಿ ಮಹಿಳೆಯ ಭೀಕರ ಕೊಲೆ

death
ಬೆಂಗಳೂರು, ಮಾ. 20 : ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ಮಧ್ಯಾಹ್ನ ಧನರಾಜ್ ಎಂಬ ವ್ಯಕ್ತಿ ರೇಸ್ ಕೋರ್ಸ್ ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ಸುನೀತಾ ಎಂಬುವವರರಿಗೆ ನಡು ರಸ್ತೆಯಲ್ಲಿಯೇ ಚಾಕುವಿನಿಂದ ಚುಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ರೇಸ್ ಕೋರ್ಸ್ ಗೇಟ್ ನಂ 3ರ ಬಳಿ ಇದ್ದ ಸಿಬ್ಬಂದಿ ಸುನೀತಾ ಅವರನ್ನು ತಕ್ಷಣ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿದರು.

ಸುಮಾರು 15 ಬಾರಿ ಧನರಾಜ್ ಸುನೀತಾ ಅವರಿಗೆ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸುನೀತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮಲ್ಲಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿ ಧನರಾಜ್ ಸುನೀತಾ ಅವರ ಸಂಬಂಧಿಕ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.ಹಾಡಹಗಲೇ, ಸಾರ್ವಜನಿಕವಾಗಿ ಎಲ್ಲರ ಎದುರೇ ಈ ಕೊಲೆ ನಡೆದಿದೆ.

ಸುನೀತಾ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪಿ ಧನರಾಜ್ ಅವರನ್ನು ಹಿಡಿದ ಸಾರ್ವಜನಿಕರು ಅವರಿಗೆ ಹಿಗ್ಗಾಮುಗ್ಗಾ ಥಳಿಸಿ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಧನರಾಜ್ ಸುನೀತಾ ಅವರ ಸಂಬಂಧಿ ಎಂದು ತಿಳಿದುಬಂದಿದ್ದು, ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+