ಬೆಂಗಳೂರಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ, ಹಿಂದಿದೆ ಈ ಕಾರಣಗಳು
ಬೆಂಗಳೂರು, ಮೇ 7: ಮಹಿಳಾ ಟೆಕ್ಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಜೆ.ಪಿ.ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದ್ದು, ಸುಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಸುಪ್ರಿಯಾ ಕಳೆದ 4 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಅವರ ಪತಿ ಅಕ್ಷಯ್ ಕೂಡ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದಾರೆ.
ಕಳೆದ ಒಂದು ತಿಂಗಳ ಹಿಂದಷ್ಟೇ ಇಬ್ಬರು ಸೇರಿ ಮಗುವಿನ ನಾಮಕರಣ ಮಾಡಿದ್ದರು. ಒಂದು ವರ್ಷದ ಮಗು ಬಿಟ್ಟು ರಾತ್ರಿ ಮನೆಯಲ್ಲಿ ಸುಪ್ರಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ಸುಪ್ರಿಯಾ ಕುಟುಂಬದವರು ಅಕ್ಷಯ್ ವಿರುದ್ಧ ದೂರಿದ್ದು, ಆತ ಸುಪ್ರಿಯಾಳಿಗೆ ವರದಕ್ಷಿಣೆ ವಿಚಾರವಾಗಿ ಸಾಕಷ್ಟು ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಅವನಿಗೆ ಬೇರೊಬ್ಬ ಹುಡುಗಿಯ ಜೊತೆ ಅಕ್ರಮ ಸಂಬಂಧವಿತ್ತು ಎಂದು ಆರೋಪಿಸಿದ್ದಾರೆ.












Click it and Unblock the Notifications