ಪತಿಗೆ ಅಕ್ರಮ ಸಂಬಂಧಕ್ಕೆ ಬೇಸತ್ತು ಲೈವ್ ವಿಡಿಯೋ ಮಾಡಿ ಜೀವಬಿಟ್ಟ 25 ವರ್ಷದ ಮಹಿಳೆ
ಬೆಂಗಳೂರು, ಜುಲೈ 29: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಅಂದ್ರಹಳ್ಳಿಯಲ್ಲಿ ನಡೆದಿದೆ. ಅಂದ್ರಹಳ್ಳಿಯ ನಿವಾಸಿ ಮಾನಸ (25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.
ಮೃತ ಮಾನಸ ಆರು ವರ್ಷಗಳ ಹಿಂದೆ ದಿಲೀಪ್ ಎಂಬಾತನನ್ನು ವಿವಾಹವಾಗಿದ್ದು, ಈ ದಂಪತಿಗೆ ಐದು ವರ್ಷದ ಒಂದು ಹೆಣ್ಣು ಮಗು ಇದೆ. ಐದು ವರ್ಷಗಳಿಂದ ಸುಖವಾಗಿದ್ದ ಸಂಬಂಧದಲ್ಲಿ ಮತ್ತೊಂದು ಮಹಿಳೆ ಬಿರುಗಾಳಿ ಎಬ್ಬಿಸಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ.

ದಿಲೀಪ್ ಕಳೆದ ಒಂದೂವರೆ ವರ್ಷದಿಂದ ಬೇರೆ ಮಹಿಳೆ ಸಹವಾಸ ಮಾಡಿದ್ದು, ಪತ್ನಿ ಹಾಗೂ ಮಗುವನ್ನು ನಿರ್ಲಕ್ಷಿಸುತ್ತಿದ್ದ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. ಇದರಿಂದ ಕುಟುಂಬದಲ್ಲಿ ಕಲಹ ಹೆಚ್ಚಾಗಿದ್ದು, ಅಕ್ರಮ ಸಂಬಂಧಕ್ಕೆ ಬೇಸತ್ತ ಮಹಿಳೆ ಗಂಡನ ಮನೆಯಲ್ಲಿ ಮೊಬೈಲ್‌ನಲ್ಲಿ ಲೈವ್ ವಿಡಿಯೋ ಮಾಡುತ್ತಾ ಸಾವಿಗೆ ಶರಣಾಗಿದ್ದಾಳೆ.
ಪತಿಯ ಕಿರುಕುಳದಿಂದಲೇ ಮಗಳು ಸಾವನ್ನಪ್ಪಿದ್ದಾಳೆ ಎಂದು ದಿಲೀಪ್ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಮಹಿಳೆಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಠಾಣೆಯ ಮುಂಭಾಗವೇ ಎರಡು ಕುಟುಂಬಸ್ಥರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications