ಬೆಂಗಳೂರಿನ ಬನ್ನೇರುಘಟ್ಟ ಬಳಿ ಮಹಿಳೆ ಮೇಲೆ ಅತ್ಯಾಚಾರ, ಕೊಲೆ!

ಬೆಂಗಳೂರು ಆಗಸ್ಟ್ 14: ಬನ್ನೇರುಘಟ್ಟ ಬಳಿ ಶನಿವಾರ ರಾತ್ರಿ 39 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತರು ಅಕ್ಕಪಕ್ಕದ ಗ್ರಾಮವೊಂದರಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮಹಿಳೆ ತನ್ನ ಕಿರಿಯ ಸಹೋದರಿಯ ಎರಡು ವರ್ಷದ ಮಗನೊಂದಿಗೆ ವಾಕಿಂಗ್ ಹೋಗಿದ್ದಳು. ಈ ವೇಳೆ ಕಾಮುಕರ ಗುಂಪು ಆಕೆಯ ಮೇಲೆ ಅತ್ಯಾಚಾರ ಎಸಗಿದೆ ಎಂದು ಅಧಿಕಾರಿಯೊಬ್ಬರು ಶಂಕಿಸಿದ್ದಾರೆ. ಅರಣ್ಯ ಪ್ರದೇಶದ ಬಳಿಯ ತೋಪಿನಲ್ಲಿ ಪಾರ್ಟಿ ಮಾಡುತ್ತಿದ್ದ ಇಬ್ಬರು ಯುವಕರು ಮಗುವಿನ ಅಳುವನ್ನು ಕೇಳಿದಾಗ, ಮಗುವಿನ ಮುಖದ ಮೇಲೆ ಗಾಯಗಳಾಗಿದ್ದನ್ನು ಕಂಡು ಘಟನೆ ಬೆಳಕಿಗೆ ಬಂದಿದೆ.

Woman was raped and murdered near Bannerghatta in Bengaluru!

ಇತ್ತ ಮಹಿಳೆ ನಾಪತ್ತೆಯಾಗಿದ್ದು, ಆಕೆಯ ಕುಟುಂಬ ಸದಸ್ಯರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಡಿದ್ದಾರೆ. ಆಕೆ ಪತ್ತೆಯಾಗದೇ ಇದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದರು. ಭಾನುವಾರ ಬೆಳಗ್ಗೆ ಗ್ರಾಮಸ್ಥರು ಆಕೆಯ ಅರೆಬೆತ್ತಲೆ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಸೂರ್ಯಾಸ್ತದ ನಂತರ ಗ್ರಾಮದ ಮಹಿಳೆಯರು ಹೊರಗೆ ಹೋಗುವುದು ಅಸುರಕ್ಷಿತವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೆಲವು ಅಪರಿಚಿತ ದುಷ್ಕರ್ಮಿಗಳು ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಕೆಯ ಗೌಪ್ಯತೆಯನ್ನು ರಕ್ಷಿಸಲು ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+