ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು, ನ.4 : ಪೊಲೀಸರಂತೆ ಮನೆಗೆ ಬಂದ ನಾಲ್ವರು ದುಷ್ಕರ್ಮಿಗಳು ಪತಿ ಮತ್ತು ಅತ್ತೆಯ ಎದುರಲ್ಲೇ ಗೃಹಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರದ ನಂತರ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ಅವರು ದೋಚಿದ್ದಾರೆ.
ಎಚ್‌ಎಸ್ಆರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಂದೂರಿನಲ್ಲಿ ಅ.24ರಂದು ರಾತ್ರಿ ಈ ಘಟನೆ ನಡೆದಿದೆ. ನಿಮ್ಮ ಮನೆಯಲ್ಲಿ ಮಾದಕ ವಸ್ತುಗಳಿವೆ ಎಂಬ ಮಾಹಿತಿ ಇದೆ. ಆದ್ದರಿಂದ ಪರಿಶೀಲನೆ ನಡೆಸಬೇಕು ಎಂದು ಪೊಲೀಸರ ಸೋಗಿನಲ್ಲಿ ಮನೆಗೆ ದುಷ್ಕರ್ಮಿಗಳು ನುಗ್ಗಿದ್ದಾರೆ.

ನಂತರ ಗೃಹಿಣಿಯ ಅತ್ತೆ ಮತ್ತು ಪತಿಯನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ, 24 ವರ್ಷದ ಗೃಹಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ನಂತರ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ. ಈ ಕುರಿತು ಅ.26ರಂದು ಎಚ್.ಎಸ್.ಆರ್.ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. [ಅತ್ಯಾಚಾರ ಆರೋಪ, ಸಿಎಂ ಆಪ್ತ ಪಕ್ಷದಿಂದ ಅಮಾನತು]
ಪ್ರಕರಣಕ್ಕೆ ಸಂಬಂಧಿಸಿದಂತೆ ನಂದೀಶ್, ಅನಿಲ್, ಸುಜಿತ್ ಮತ್ತು ಸೈಮನ್ ಎಂಬ ಆರೋಪಿಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಘಟನೆಯನ್ನು ಆರೋಪಿಗಳು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.
ಟೆಕ್ಕಿಯಿಂದ ಲೈಂಗಿಕ ದೌರ್ಜನ್ಯ : ಹತ್ತು ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸ್ವಪ್ನಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ











Click it and Unblock the Notifications