ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ, ಕೊಲೆ
ಬೆಂಗಳೂರು, ಫೆ. 27 : ಬೆಂಗಳೂರಿನಲ್ಲಿ ಯುವತಿಯನ್ನು ಕೊಲೆ ಮಾಡಿ, ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಎಚ್‌ಎಸ್ಆರ್ ಲೇಔಟ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಯಾದ ಯುವತಿ ಬಂಗಾರಪೇಟೆಯವರು ಎಂದು ತಿಳಿದುಬಂದಿದೆ.
ಸರ್ಜಾಪುರ ರಸ್ತೆಯ ದೊಡ್ಡ ಕನ್ನೇಲಿ ಬಳಿಯ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ನ ಸ್ನಾನಗೃಹದಲ್ಲಿ ಶುಕ್ರವಾರ ಸಂಜೆ ವಂದನಾ (20) ಶವ ಪತ್ತೆಯಾಗಿದೆ. ಅತ್ಯಾಚಾರ ನಡೆಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕೊಲೆ ಮಾಡಿದ ಬಳಿಕ ದುಷ್ಕರ್ಮಿಗಳು ಶವದ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಶವ ಸಂಪೂರ್ಣವಾಗಿ ಸುಟ್ಟುಹೋಗಿದೆ. ಮೃತ ವಂದನಾ ಬಂಗಾರಪೇಟೆ ತಾಲೂಕು ಮಾರಿಕೊಪ್ಪಂ ಗ್ರಾಮದ ವೆಂಕಟಪ್ಪ ಮತ್ತು ಭವಾನಿ ದಂಪತಿಯ ಮೂವರು ಮಕ್ಕಳ ಪೈಕಿ ಕಿರಿಯ ಪುತ್ರಿ. ವಂದನಾ ಬೆಳ್ಳಂದೂರಿನ ಟೋಟಲ್ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು.
ವಂದನಾ ತಂದೆ-ತಾಯಿ ಮತ್ತು ಸಹೋದರಿ ಗುರುವಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂಗಾರಪೇಟೆಗೆ ತೆರಳಿದ್ದರು. ವಂದನಾ ಶುಕ್ರವಾರ ಕೆಲಸಕ್ಕೆ ಹೋಗಿದ್ದವರು ಆರೋಗ್ಯ ಸರಿ ಇಲ್ಲವೆಂಬ ಕಾರಣಕ್ಕೆ ಬೇಗನೆ ಮನೆಗೆ ವಾಪಸ್ ಬಂದಿದ್ದರು. ಸಂಜೆ ಅವರ ಶವ ಸ್ನಾನಗೃಹದಲ್ಲಿ ಪತ್ತೆಯಾಗಿದೆ. ಪರಿಚಿತರೇ ಈ ಕೃತ್ಯ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.












Click it and Unblock the Notifications