Women's Day: ಇಂದು ಬೆಂಗಳೂರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ
ಮಹಿಳಾ ದಿನಾಚರಣೆ: ಇಂದು ಮಹಿಳಾ ಪ್ರಯಾಣಿಕರಿಗೆ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ.
ಬೆಂಗಳೂರು ಮಾರ್ಚ್ 8: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಇಂದು (ಮಾರ್ಚ್ 8) ಮಹಿಳಾ ಪ್ರಯಾಣಿಕರಿಗೆ ನಗರದಾದ್ಯಂತ ಉಚಿತ ಬಸ್ ಪ್ರಯಾಣವನ್ನು ನೀಡುತ್ತಿದೆ. ಈ ಸೌಲಭ್ಯದಿಂದ ಮಹಿಳೆಯರು ಎಲ್ಲಿಗೆ ಬೇಕಾದರೂ ಹಣ ನೀಡದೆ ಬಿಎಂಟಿಸಿಯಲ್ಲಿ ಪ್ರಯಾಣ ಮಾಡಬಹುದು. ಎಷ್ಟು ದೂರವಾದರೂ ಬಿಎಂಟಿಸಿ ವ್ಯಾಪ್ತಿಯಲ್ಲಿ ಪ್ರಯಾಣಿಸಬಹುದು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ನಗರದಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣವನ್ನು ಇಂದು ಒದಗಿಸಲಿದೆ ಎಂದು BMTC ಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಮಾರ್ಚ್ 7ರ ಮಧ್ಯರಾತ್ರಿ 12 ಗಂಟೆಯಿಂದ ಮಾರ್ಚ್ 8ರ ಮಧ್ಯರಾತ್ರಿ 12 ಗಂಟೆ ರವರೆಗೆ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಿಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಬಹುದು. ವೋಲ್ವೋ, ಎಸಿ ಬಸ್, ವಾಯುವ್ಯ ರಸ್ತೆ ಸಾರಿಗೆ, ಏರ್ಪೋರ್ಟ್ ಬಸ್ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್ನಲ್ಲಿ ಉಚಿತವಾಗಿ ನಾಳೆ ಒಂದು ದಿನ ಮಹಿಳೆಯರು ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಮಹಿಳೆಯರು ನಗರದಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಳಸುವುದರಿಂದ, ನಗರದಲ್ಲಿ ಟ್ರಾಫಿಕ್ ದಟ್ಟಣೆ ಮತ್ತು ವಾಯು ಮಾಲಿನ್ಯ ಕಡಿಮೆಯಾಗುತ್ತದೆ ಮತ್ತು ನಗರದಲ್ಲಿ ಸಾಮೂಹಿಕ ಸಾರಿಗೆ ಸುಧಾರಿಸುತ್ತದೆ ಎಂದು ಬಿಎಂಟಿಸಿ ಅಧಿಕೃತ ಪ್ರಕಟಣೆ ಹೇಳುತ್ತದೆ. ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಯಾವುದೇ ದಾಖಲಾತಿ, ಗುರುತಿನ ಚೀಟಿಯ ಅವಶ್ಯಕತೆ ಇಲ್ಲ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕೃತ ಬಿಡುಗಡೆಯ ಪ್ರಕಾರ, ವಿದ್ಯಾರ್ಥಿಗಳು, ಐಟಿ ಸಮುದಾಯ, ಆರ್ಥಿಕವಾಗಿ ದುರ್ಬಲ ವರ್ಗಗಳಂತಹ ಪ್ರಯಾಣಿಕರ ಅಗತ್ಯಗಳಿಗೆ ಅನುಗುಣವಾಗಿ ನಾಗರಿಕ ಕೇಂದ್ರಿತ ಹೇಳಿ ಮಾಡಿಸಿದ ಸೇವೆಗಳನ್ನು ನಿರ್ವಹಿಸುವ ನಗರದಲ್ಲಿ BMTC ಏಕೈಕ ಸಾರ್ವಜನಿಕ ಬಸ್ ಸಾರಿಗೆಯಾಗಿದೆ.
ನಿತ್ಯ ಬೆಂಗಳೂರಿನಲ್ಲಿ 10.21 ಲಕ್ಷ ಮಹಿಳಾ ಪ್ರಯಾಣಿಕರು ಸಂಚಾರ ಮಾಡುತ್ತಾರೆ. ಮಹಿಳಾ ದಿನಾಚರಣೆ ದಿನದಂದು ಫ್ರೀ ಸೇವೆ ಯಿಂದ ಸುಮಾರು 20 ಲಕ್ಷ ಮಹಿಳೆಯರು ಸಂಚಾರ ಮಾಡಬಹುದು ಅಂತ ಅಂದಾಜು ಮಾಡಿದ್ದಾರೆ.

ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಬಿಎಂಟಿಸಿ ವ್ಯಸ್ಥಾಪಕ ನಿದೇಶಕಿ ಸತ್ಯವತಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಅದರಂತೆ ಸರ್ಕಾರವು ಒಪ್ಪಿಗೆ ನೀಡಿದ್ದು, ಮಹಿಳೆಯರಿಗೆ ಒಂದು ದಿನದ ಮಟ್ಟಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.
ಪ್ರಸ್ತುತ BMTC 6600 ಬಸ್‌ಗಳ ಫ್ಲೀಟ್ ಗಾತ್ರವನ್ನು ಹೊಂದಿದ್ದು, 5567 ಶೆಡ್ಯೂಲ್‌ಗಳನ್ನು ನಿರ್ವಹಿಸುತ್ತಿದೆ, 10.84 ಲಕ್ಷ ಕಿಮೀ ಗಳನ್ನು ಕ್ರಮಿಸುತ್ತದೆ ಮತ್ತು ಪ್ರತಿದಿನ ಸರಾಸರಿ 29.0 ಲಕ್ಷ ಪ್ರಯಾಣಿಕರನ್ನು ಸಾಗಿಸುತ್ತದೆ.
ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅಂದರೆ 08.03.2023 ರಂದು, BMTC ತನ್ನ ಎಲ್ಲಾ ಬಸ್ ಸೇವೆಗಳಲ್ಲಿ AC ವಜ್ರ ಮತ್ತು ವಾಯುವಜ್ರ (ವಿಮಾನ ನಿಲ್ದಾಣ) ಸೇವೆಗಳು ಸೇರಿದಂತೆ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications