ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಟೀಕೆ ಬೆನ್ನಲ್ಲೆ ಸ್ಪಷ್ಟನೆ ನೀಡಿದ ಸಚಿವ ಅಶ್ವತ್ಥ ನಾರಾಯಣ್

'ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ'

ಬೆಂಗಳೂರು, ಫೆಬ್ರವರಿ. 16: ಚುನಾವಣೆ ಹತ್ತಿರದಲ್ಲಿರುವಾಗಲೇ ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಗುರಿಯಾಗಿದೆ.

ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. "ನಿಮಗೆ ಟಿಪ್ಪು ಬೇಕಾ..? ಸಾವರ್ಕರ್ ಬೇಕಾ..? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಉರಿಗೌಡ ಮತ್ತು ನಂಜೇಗೌಡ ಏನ್ ಮಾಡಿದ್ದರು. ಹಾಗೇಯೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು" ಎಂದು ಹೇಳಿದ್ದರು.

ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ್, ಇದು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದಿದ್ದಾರೆ.

Words i used to compare Tipu-Siddaramaiah are casual allusions, not malicious words says Ashwath Narayan

"ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ" ಎಂದು ಗುರುವಾರ ಟ್ವೀಟ್ ಮಾಡಿದ್ದಾರೆ.

ಮುಂದುವರಿದು, "ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ" ಎಂದು ಹೇಳಿದ್ದಾರೆ.

"ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ" ಎಂದು ಅಶ್ವತ್ಥ್ ನಾರಾಯಣ್‌ ಹೇಳಿದ್ದಾರೆ.

ಅಶ್ವತ್ಥ್ ನಾರಾಯಣ್‌ ಹೇಳಿಕೆ ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಹಳಿಕೆ ನಿಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವತ್ಥ್‌ ನಾರಾಯಣ್‌ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ..? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ" ಎಂದು ಟೀಕಿಸಿದ್ದರು.

Words i used to compare Tipu-Siddaramaiah are casual allusions, not malicious words says Ashwath Narayan

"ನನ್ನ ಹತ್ಯೆಗೆ ಅಶ್ವತ್ಥ್‌ ನಾರಾಯಣ್‌ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ..?" ಎಂದಿದ್ದ ಅವರು, ಪ್ರಧಾನಿ ಮತ್ತು ಸಿಎಂ ಪ್ರತಿಕ್ರಿಯೆ ಬಯಸಿದ್ದರು.

"ಸಚಿವ ಅಶ್ವತ್ಥ್‌ ನಾರಾಯಣ್‌ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ..?" ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+