ವಿಶ್ವ ಆರೋಗ್ಯ ದಿನ 2026: ಸ್ವಸ್ಥ ಕರ್ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ನೀಡಿದ 'ಆರೋಗ್ಯ ಭಾಗ್ಯ'ಗಳ ಪಟ್ಟಿ ಇಲ್ಲಿದೆ
ಬೆಂಗಳೂರು: ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ 2026 (World Health Day 2026) ಆಚರಿಸಲಾಗುತ್ತದೆ. ಇಂದು ಮಂಗಳವಾರ ಬೆಂಗಳೂರು, ಕರ್ನಾಟಕ ದೇಶದೆಲ್ಲಡೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಸ್ಥಾಪನೆಯ ನೆನಪಿಗಾಗಿ ಈ ವಿಶಿಷ್ಟ ದಿನವನ್ನು ಅರ್ಥಪೂರ್ಣವಾಗಿ ಕಳೆಯಲಾಗುತ್ತದೆ. 2026ರಲ್ಲಿ "ಆರೋಗ್ಯಕ್ಕಾಗಿ ಒಟ್ಟಾಗಿ: ವಿಜ್ಞಾನದ ಜೊತೆ ನಿಲ್ಲಿ' ಎಂಬ ಘೋಷವಾಕ್ಯ ಹೊರಡಿಸಲಾಗಿತ್ತು. ಈ ಪ್ರಯುಕ್ತ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದಲ್ಲಿ ಆರೋಗ್ಯ ವಲಯಕ್ಕೆ ಏನೆಲ್ಲ ಕೊಡಲಾಗಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರ ವಿವರಿಸಿದ್ದಾರೆ. ಅದರಲ್ಲಿ ಅನುದಾನ ಹಂಚಿಕೆ, ಆಸ್ಪತ್ರೆ ನಿರ್ಮಾಣ, ವ್ಯವಸ್ಥೆಯಲ್ಲಿನ ಸುಧಾರಣೆ, ಆಸ್ಪತ್ರೆ ನಿರ್ಮಾಣ ಸೇರಿದಂತೆ ಒಟ್ಟಾರೆ ಅಭಿವೃದ್ಧಿಗೆ ಕೈಗೊಂಡ ನಿರ್ಧಾರಗಳ ಪಟ್ಟಿ ಇವೆ.
ಕರ್ನಾಟಕ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮುತುವರ್ಜಿ ನೀಡುತ್ತಿದೆ. ಸ್ವಸ್ಥ ಸಮಾಜ - ಸದೃಢ ಕರ್ನಾಟಕ ಧ್ಯೇಯದಡಿ ಕಾರ್ಯ ನಿರ್ವಹಿಸುತ್ತಿದೆ. ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ, ಉಚಿತ ಚಿಕಿತ್ಸೆ, ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ, ಗಂಭೀರ ಕಾಯಿಲೆಗಳಿಗೆ ಅಗ್ಗದ ದರದಲ್ಲಿ ಚಿಕಿತ್ಸೆ, ಹೆಣ್ಣುಮಕ್ಕಳು ವಿಶೇಷವಾಗಿ ತಾಯಂದಿರು ಹಾಗೂ ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡುವ ಮೂಲಕ ಸ್ವಸ್ಥ ಕರ್ನಾಟಕ ನಿರ್ಮಾಣದತ್ತ ದಿಟ್ಟ ಹೆಜ್ಜೆಯಿಟ್ಟಿದೆ ಎಂದು ಸಿದ್ದರಾಮಯ್ಯ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ವರ್ಗದ, ಎಲ್ಲಾ ಪ್ರದೇಶದ ಜನತೆಗೆ ಆರೋಗ್ಯಯುತ ನೆಮ್ಮದಿಯ ಬದುಕನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಯೋಜನೆಗಳ ವಿವರ ಹೀಗಿದೆ.
ಆರೋಗ್ಯ ಇಲಾಖೆ: ಸರ್ಕಾರ ಕ್ರಮ, ಆದ್ಯತೆಗಳ ಪಟ್ಟಿ
* ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳು KMERC ಅನುದಾನದಡಿಯಲ್ಲಿ ವಿಸ್ತರಣೆ.
* ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್ ಸೇವೆಗಳನ್ನು ಒದಗಿಸಲು ಕ್ರಮ.
* ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು ಕೆಕೆಆರ್‌ಡಿಬಿ ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ ಆದ್ಯತೆ ಮೇರೆಗೆ ಅನುದಾನ ಮೀಸಲಿಡಲಾಗಿದೆ
* ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ರೋಗಿಗಳಿಗೆ ಸಂಪೂರ್ಣ ಗಣೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ ಮತ್ತು ಯುಪಿಐ ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ ಜಾರಿ.
* ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಲಿ -ರೇಡಿಯಾಲಜಿ ಮತ್ತು ಟೆಲಿ- ಲೇಬರ್ ರೂಮ್‌ಗಳ ಅಳವಡಿಕೆ
* ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿ ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ.
* ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ ಮಾದರಿಯಲ್ಲಿ ಸ್ಥಾಪಿಸಲು ತೀರ್ಮಾನ.
* ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಕ್ರಮ.
* 236 ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡ ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆ ಆಡಲಾಗಿದೆ.
* ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗೆ ₹620 ಕೋಟಿ ಅನುದಾನ ಮತ್ತು ಉಪಕರಣಗಳ ಖರೀದಿಗಾಗಿ ₹220 ಕೋಟಿ ಮೀಸಲಿಟ್ಟಿದ್ದೇವೆ
* 180 ಕೋಟಿ ವೆಚ್ಚದಲ್ಲಿ ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ.
* ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗಿದೆ.
* ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆ ಮುನಿರಾಬಾದ್ - ಟಿ.ಬಿ. ಡ್ಯಾಂನಲ್ಲಿ ಸ್ಥಾಪನೆ.
* ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐವಿಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ 1 ಕೋಟಿ ರೂ. ಮೀಸಲಿಡಲಾಗಿದೆ.
* ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ
* ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗೆ ₹620 ಕೋಟಿ ಅನುದಾನ ಮತ್ತು ಉಪಕರಣಗಳ ಖರೀದಿಗಾಗಿ ₹220 ಕೋಟಿ ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಬಗೆಗಿನ ತಮ್ಮ ಸಾಧನೆ, ಆದ್ಯತೆ ಕುರಿತು ಮಾಹಿತಿ ನೀಡಿದರು.
ನಮ್ಮ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮುತುವರ್ಜಿ ನೀಡುತ್ತಿದ್ದು, ಸ್ವಸ್ಥ ಸಮಾಜ - ಸದೃಢ ಕರ್ನಾಟಕ ಧ್ಯೇಯದಡಿ ಕಾರ್ಯನಿರ್ವಹಿಸುತ್ತಿದೆ. ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ, ಉಚಿತ ಚಿಕಿತ್ಸೆ, ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ, ಗಂಭೀರ ಕಾಯಿಲೆಗಳಿಗೆ ಅಗ್ಗದ ದರದಲ್ಲಿ ಚಿಕಿತ್ಸೆ, ಹೆಣ್ಣುಮಕ್ಕಳು ವಿಶೇಷವಾಗಿ ತಾಯಂದಿರು ಹಾಗೂ… pic.twitter.com/vPNc7926ui
— Siddaramaiah (@siddaramaiah) April 7, 2026












Click it and Unblock the Notifications