ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವ ಹೃದಯ ದಿನ: ಸಣ್ಣ ವಯಸ್ಸಿನ ಹೃದಯಾಘಾತದ ಕುರಿತು ಅರಿವಿನ ಪಾಠ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 29: ಮೂವತ್ತು- ನಲವತ್ತು ವಯಸ್ಸಿಗೆ ಹೃದಯಾಘಾತಕ್ಕೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿಶ್ವ ಹೃದಯ ದಿನದ(ಸೆ.29) ಅಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಶೈಲಿಯ ಬಗ್ಗೆ ಅನೇಕರು ಅರಿವಿನ ಕಿವಿಮಾತು ಹೇಳಿದ್ದಾರೆ.

ಇತೀಚೆಗಷ್ಟೇ ಬಿಗ್‌ಬಾಸ್​ ವಿನ್ನರ್ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ನಿಧನ​ದ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಚಿಕ್ಕ ವಯಸ್ಸಿಗೆ ಹೃದಯದ ತೊಂದರೆಯಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಈ ಕುರಿತು ಸಾಮಾಜಿಕ ಜಾಲತಾಣ "ಕೂ' ನಲ್ಲಿ ಸಾಮಾನ್ಯ ಜನರು, ಫಿಟ್ನೆಸ್ ತಜ್ಞರು, ವೈದ್ಯರು ತಮ್ಮ ಅರಿವಿನ ಮಾತುಗಳನ್ನು #ಇದುಹೃದಯಗಳವಿಷಯ ಹಾಗೂ #ವಿಶ್ವಹೃದಯದಿನ ಹ್ಯಾಷ್ ಟ್ಯಾಗ್ ಅಡಿ ಹಂಚಿಕೊಂಡಿದ್ದಾರೆ.

World Heart Day 2021: Whats Behind the Rise In Heart Attacks Among Young People?

ವಿಶ್ವ ಹೃದಯ ದಿನ 2021: ದಿನಾಂಕ, ಇತಿಹಾಸ ಹಾಗೂ ಮಹತ್ವವಿಶ್ವ ಹೃದಯ ದಿನ 2021: ದಿನಾಂಕ, ಇತಿಹಾಸ ಹಾಗೂ ಮಹತ್ವ

ಭಾರತ ಹೃದ್ರೋಗದ ರಾಜಧಾನಿ!
"ಹೃದಯಾಘಾತ ತೀರಾ ಗಂಭೀರ ವಿಷಯವಾಗಿದ್ದು, ಕಳೆದೈದು ವರ್ಷದಲ್ಲಿ ಶೇ.54ಕ್ಕೂ ಹೆಚ್ಚು ಹೃದಯಾಘಾತದ ಸಾವುಗಳಾಗಿವೆ. ಚಿಕಿತ್ಸೆಯೂ ಸುಲಭವೇ, ನಾವು ಗೋಜಲು ಮಾಡುತ್ತಿದ್ದೇವೆ. ಒತ್ತಡ, ಉದ್ವೇಗ ಮತ್ತು ಅಧಿಕ ದೇಹತೂಕ ಬೇಡ. "ಹಿತ ಮಿತ"ವಾಗಿ ಎಲ್ಲಾ ತರಹದ ಊಟವಿರಲಿ. ಹೆಚ್ಚು ಬೇಕರಿ, ಎಣ್ಣೆ ಮತ್ತು ಫ್ರಿಡ್ಜ್ ತಿನಿಸು ಬೇಡ. ವಾರಕ್ಕೆ ನಾಲ್ಕೈದು ದಿನ ವ್ಯಾಯಾಮ/ ನಡಿಗೆ. ಉತ್ತಮ ನಿದ್ರೆ, ಆಟ ಬೇಕು,'' ಎಂದು ಮಂಜುನಾಥ್ ಎನ್ನುವವರು ಕೂ ಮಾಡಿದ್ದಾರೆ.

World Heart Day 2021: Whats Behind the Rise In Heart Attacks Among Young People?

ಆಹಾರದ ಪ್ರಭಾವ ಹೆಚ್ಚು
"ಹೃದಯದ ಆರೋಗ್ಯಕ್ಕೆ ನಿತ್ಯ ನೀವು ಸೇವಿಸುವ ಆಹಾರದ ಪ್ರಭಾವ ಹೆಚ್ಚು. ಬಾದಾಮಿ ಹೃದಯ ರಕ್ಷಕ ಆಹಾರ. ಆದರೆ ಕೇವಲ ಬಾದಾಮಿ ಮಾತ್ರವಲ್ಲ. ಇನ್ನೂ ಹಲವು ಆಹಾರಕ್ಕೆ ಆರೋಗ್ಯವನ್ನು ಕಾಪಾಡುವ ಶಕ್ತಿ ಇದೆ. ಕೆಲವು ಹೃದಯ ರೋಗ ಬಾರದಂತೆ ತಡೆದರೆ ಇನ್ನೂ ಹಲವು ಅಪಾಯದ ಹಂತ ತಲುಪುವುದನ್ನು ತಡೆಯುತ್ತವೆ. ಬಟರ್‌ಫ್ರೂಟ್ ತಿನ್ನುವ ಅಭ್ಯಾಸ ರೂಢಿಸಿಕೊಳ್ಳಿ. ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ,'' ಎಂದು ಅಜಯ್ ಹೇಳಿದ್ದಾರೆ.

World Heart Day 2021: Whats Behind the Rise In Heart Attacks Among Young People?

ವ್ಯಾಯಾಮದ ಕೊರತೆ
"ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುವವರು ಮತ್ತು ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬದಲಾದ ಜೀವನ ಶೈಲಿ, ಒತ್ತಡ, ವ್ಯಾಯಾಮದ ಕೊರತೆ, ವಾಯು ಮಾಲಿನ್ಯ ಮುಂತಾದವು ಇದಕ್ಕೆ ಕಾರಣವಾಗಿದೆ. ಕೋವಿಡ್‌ನಂತಹ ಮಹಾಮಾರಿಯ ಭಯದಲ್ಲಿಯೇ ಬದುಕು ಕಟ್ಟಿಕೊಂಡಿರುವ ನಾವು, ಸಾಂಕ್ರಾಮಿಕ ರೋಗವಲ್ಲದ ಹೃದಯ ಸಂಬಂಧಿ ರೋಗದೊಂದಿಗೂ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ,'' ಎಂದು ತನುಷಾ ಕೂ ಮಾಡಿದ್ದಾರೆ.

Recommended Video

ದಸರಾ ಉದ್ಘಾಟನೆಗೆ SM ಕೃಷ್ಣಾರನ್ನು ಆಯ್ಕೆ ಮಾಡಿ ಸಂಪ್ರದಾಯ ಮುರಿದ್ರಾ CM ಬೊಮ್ಮಾಯಿ? | Oneindia Kannada

English summary
World Heart Day 2021: Heart attacks are on the rise in patients aged 20-30 years old, What's Behind the Rise in Heart Attacks Among Young People?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X