ತಂಬಾಕುವಿರೋಧಿ ದಿನಕ್ಕಾಗಿ ಮೇ 31 ರಂದು ವ್ಯಂಗ್ಯಚಿತ್ರ ಪ್ರದರ್ಶನ
ಬೆಂಗಳೂರಿಗರಲ್ಲೂ ತಂಬಾಕಿನ ಮಾರಕ ಪರಿಣಾಮಗಳ ಬಗ್ಗೆ ಪ್ರಜ್ಞೆ ಮೂಡಿಸುವ ಸಲುವಾಗಿ ನಾಳೆ (ಮೇ 31) ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ವ್ಯಂಗ್ಯಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು, ಮೇ 30: ನಾಳೆ ವಿಶ್ವ ತಂಬಾಕುವಿರೋಧಿ ದಿನ (ಮೇ 31). ತಂಬಾಕು ಮತ್ತು ಅದರ ಉತ್ಪನ್ನಗಳಿಂದ ಆರೋಗ್ಯಕ್ಕಾಗುವ ಹಾನಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ.[ಶಂಕರ್ ಕಾರ್ಟೂನಿಸ್ಟ್ ಮತ್ತು ಸೊಗಸಾದ ಕಾಫಿ ಪರಿಮಳ]
ಬೆಂಗಳೂರಿಗರಲ್ಲೂ ತಂಬಾಕಿನ ಮಾರಕ ಪರಿಣಾಮಗಳ ಬಗ್ಗೆ ಪ್ರಜ್ಞೆ ಮೂಡಿಸುವ ಸಲುವಾಗಿ ನಾಳೆ (ಮೇ 31) ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ವ್ಯಂಗ್ಯಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.[ತಂಬಾಕು ಬಳಕೆ ನಿಯಂತ್ರಣ : ಕನ್ನಡಿಗ ಡಾ.ವಿಶಾಲ್‍ರಾವ್ ಅವರಿಗೆ ಪ್ರತಿಷ್ಠಿತ ವಿಲ್ಕೆನ್‍ಫೆಲ್ಡ್ ಪ್ರಶಸ್ತಿ]

ಪ್ರಖ್ಯಾತ ವ್ಯಂಗ್ಯಚಿತ್ರಕಾರ ಶಂಕರ್ ಅವರ ಶಂಕರ್ ಕಾರ್ಟೋನಿಸ್ಟ್ ಕೆಫೆ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮ ಬನಶಂಕರಿಯ ಬಿಡಿಎ ಕಾಂಪ್ಲೆಕ್ಸ್ ನ ವೈಭವ್ ಹೊಟೆಲ್ ಬಳಿಯ ಫೂಟ್ ಪಾತ್ ಗ್ಯಾಲರಿಯಲ್ಲಿ ನಡೆಯಲಿದೆ.[ತಂಬಾಕು ಬೇಕಿದ್ರೆ ಸೇವಿಸಿ, ದುಷ್ಪರಿಣಾಮ ನೀವೇ ಅನುಭವಿಸಿ!]
ಈಗಾಗಲೇ ಪ್ರತಿವರ್ಷ ಲಕ್ಷಾಂತರ ಜನರು ತಂಬಾಕು ಸೇವನೆಯಿಂದಾಗಿ ಮಾರಕ ರೋಗಗಳಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಇವುಗಳ ಕುರಿತು ಜಾಗೃತಿ ಮೂಡಿಸುವ ಸಣ್ಣ ಪ್ರಯತ್ನ ಇದಾಗಿದೆ. ಪ್ರದರ್ಶನದಲ್ಲಿ ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ 9591778231 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.[ಧೂಮಪಾನ ಮಾಡುವುದು ಬಿಡುವುದು ನಿಮ್ಮಿಷ್ಟ!]












Click it and Unblock the Notifications