ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೌರತ್ವ ಕಾಯ್ದೆ ಬೆಂಬಲಿಸಿ ಮೋದಿಗೆ ಪತ್ರ ಬರೆದ ಸಾಹಿತಿ ಚಿದಾನಂದಮೂರ್ತಿ

|
Google Oneindia Kannada News

ಬೆಂಗಳೂರು, ಡಿಸೆಂಬರ್, 28: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ಬೆಂಬಲಿಸಿ ಹಿರಿಯ ಸಾಹಿತಿ ಎಂ ಚಿದಾನಂದಮೂರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಡಿ 28 ರಂದು ಪತ್ರವನ್ನು ಕಳಿಸಿಕೊಟ್ಟಿರುವ ಅವರು, ಕಾಯ್ದೆ ಜಾರಿಗೊಳಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಏತಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದರು ಗಂಗಾವತಿ ಪ್ರಾಣೇಶ್?ಏತಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದರು ಗಂಗಾವತಿ ಪ್ರಾಣೇಶ್?

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕೈಗೊಳ್ಳುತ್ತಿರುವ ಕ್ರಮಗಳನ್ನು ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಮೋದಿ ಅವರು ಭಾರತದಲ್ಲಿದ್ದುಕೊಂಡು ಭಾರತಕ್ಕೆ ಎರಡು ಬಗೆಯುವ ಶಕ್ತಿಗಳಿಗೆ ದುಸ್ವಪ್ನರಾಗಿದ್ದಾರೆ. ದೇಶದ ಭದ್ರತೆಗೆ ಇನ್ನಷ್ಟು ಕ್ರಮ ಕೈಗೊಳ್ಳಲಿ. ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ತಂದಿರುವುದು ಅತ್ಯಂತ ಸೂಕ್ತವಾಗಿದೆ ಬೆಂಬಲಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಅಭಿನಂದಿಸಿ ನಾಡಿನ ಹಿರಿಯ ಸಂಶೋಧಕರಾದ ಡಾ. ಎಂ.ಚಿದಾನಂದ ಮೂರ್ತಿ ಪತ್ರ ಬರೆದಿದ್ದಾರೆ. ಕಾಯ್ದೆಯು ಮುಸ್ಲೀಮರ ವಿರೋಧಿಯಲ್ಲ. ಭಾರತೀಯತ್ವದ, ಭಾರತೀಯ ಸಂಸ್ಕೃತಿಯ, ದೇಶಪ್ರೇಮಿಗಳ ಪರವಾದ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ದಿಟ್ಟ ಕ್ರಮ ತೆಗೆದುಕೊಂಡಿದ್ದೀರಿ ಎಂದು ಡಾ. ಎಂ.ಚಿದಾನಂದ ಮೂರ್ತಿ ಅವರು ಪತ್ರದಲ್ಲಿ ಹೇಳಿದ್ದಾರೆ.

Writer M Chidananda Murthy Letter To PM Modi On Citizenship Amendment Act

ವಿವಾದಿತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಮಸೂದೆ ಸಂಸತ್ ನಲ್ಲಿ ಅನುಮೋದನೆ ಪಡೆದುಕೊಂಡು ಕಾನೂನಾಗಿದೆ. ಇದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಬಿಜೆಪಿ ಕೂಡ ವ್ಯಾಪಕವಾಗಿ ಇದರ ಕುರಿತು ಜನಜಾಗೃತಿ ಮಾಡುತ್ತಿದೆ. ಈಶಾನ್ಯ ಭಾರತದಲ್ಲಿ ಹಾಗೂ ದೆಹಲಿಯಲ್ಲಿ ಹಿಂಸಾಚಾರಗಳು ನಡೆಯುತ್ತಿವೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

English summary
Writer M Chidananda Murthy Letter To PM Modi On Citizenship Amendment Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X