ಯಲಹಂಕ ಶಾಸಕ ಎಸ್‌. ಆರ್. ವಿಶ್ವನಾಥ್‌ಗೆ ಕೋವಿಡ್ ಸೋಂಕು

ಬೆಂಗಳೂರು, ಸೆಪ್ಟೆಂಬರ್ 11 : ಬೆಂಗಳೂರಿನ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್‌ಗೆ ಕೋವಿಡ್ ಸೋಂಕು ತಗುಲಿದೆ. "ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ" ಎಂದು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಶುಕ್ರವಾರ ಶಾಸಕ ಎಸ್. ಆರ್. ವಿಶ್ವನಾಥ್ ಕೋವಿಡ್ ಸೋಂಕು ತಗುಲಿದೆ ಎಂದು ಹೇಳಿದ್ದಾರೆ. ಎಸ್. ಆರ್. ವಿಶ್ವನಾಥ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯೂ ಹೌದು.

"ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿದ್ದು ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ" ಎಂದು ಶಾಸಕರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Yalahanka BJP MLA SR Vishwanath Tested Positive For COVID 19

"ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ" ಎಂದು ಶಾಸಕರು ಮನವಿ ಮಾಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ 3161 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,14,208. ಒಟ್ಟು ಪ್ರಕರಣಗಳ ಸಂಖ್ಯೆ 1,60,205. ನಗರದಲ್ಲಿ ಇದುವರೆಗೂ 2340 ಜನರು ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+