ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರವೇ ಅಧ್ಯಕ್ಷರನ್ನು ಭೇಟಿ ಮಾಡಿದ ಯಶವಂತಪುರ ಜೆಡಿಎಸ್ ಅಭ್ಯರ್ಥಿ

|
Google Oneindia Kannada News

ಬೆಂಗಳೂರು, ನವೆಂಬರ್ 27: ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪ್ರಚಾರದಲ್ಲಿ ಮುಳುಗಿದೆ.

ಯಶವಂತಪುರ ಜೆಡಿಎಸ್ ಅಭ್ಯರ್ಥಿ ಟಿ.ಎನ್. ಜವರಾಯೀಗೌಡ ಒಕ್ಕಲಿಗರ ಮತ ಒಟ್ಟು ಸೇರಿಸುವ ಪ್ರಯತ್ನ ಮುಂದುವರೆಸಿದ್ದಾರೆ. ಅದೇ ಕಾರಣಕ್ಕೆ ಇಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರನ್ನು ಭೇಟಿ ಮಾಡಿ ಒಕ್ಕಲಿಗರ ಮತ ಸೆಳೆಯಲು ಮುಂದಾಗಿದ್ದಾರೆ.

ಯಶವಂತಪುರ ಉಪ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಯಾರು?ಯಶವಂತಪುರ ಉಪ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಯಾರು?

ನಾಗರಬಾವಿಯಲ್ಲಿರುವ ನಾರಾಯಣಗೌಡ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ರಕ್ಷಣಾ ವೇದಿಕೆ ಕಾರ್ಯಕರ್ತರನ್ನೂ ಜೆಡಿಎಸ್‌ನತ್ತ ಸೆಳೆಯುವ ಪ್ಲಾನ್ ಮಾಡಿದ್ದಾರೆ. ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಸ್‌ಟಿ ಸೋಮಶೇಖರ್, ಪಾಳ್ಯ ನಾಗರಾಜ್ ಕಣದಲ್ಲಿದ್ದಾರೆ.

Yashwantpur JDS Candidate Who Meets Karave President

ಡಿಸೆಂಬರ್ 5ರಂದು ಕರ್ನಾಟಕದ ಒಟ್ಟು 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರ ಬೀಳಲಿದೆ.

ಯಶವಂತಪುರದಲ್ಲಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಭರ್ಜರಿ ಪ್ರಚಾರ ನಡೆಸಿದರು. ಜೆಡಿಎಸ್ ಅಭ್ಯರ್ಥಿ ಜವರಾಯೆಗೌಡ ಪರವಾಗಿ ಎಚ್‌ಡಿಕೆ ಪ್ರಚಾರ ಹಾಗೂ ರೋಡ್ ಶೋ ನಡೆಸಿದರು.

ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್‌.ಟಿ ಸೋಮಶೇಖರ್ ಪರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರು ಪ್ರಚಾರ ನಡೆಸಿದ್ದಾರೆ.

English summary
Yashwantpur JDS Candidate Javarayi Gowda Met Karnataka Rakshana Vedike President Narayanagowda residence Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X