ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ ಗಡಿಬಿಡಿಯಲ್ಲಿಯೇ ಯಡಿಯೂರಪ್ಪ ಬಂಪರ್ ಗಿಫ್ಟ್

|
Google Oneindia Kannada News

ಬೆಂಗಳೂರು, ಫೆ. 04: ಸಂಪುಟ ವಿಸ್ತರಣೆ ಒತ್ತಡಗಳ ಮಧ್ಯೆಯೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಬಡ ಜನರಿಗೆ ಬಡವರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಬಡವರಿಗೆ ವಸತಿ ಸೇರಿದಂತೆ ಸಂಚಾರಕ್ಕೆ ಅತ್ಯುತ್ತಮ ಸೌಲಭ್ಯ ಒದಗಿಸುವ ಭರವಸೆ ಕೊಟ್ಟಿದ್ದಾರೆ.

ಬೆಂಗಳೂರಿನ ಅಸಂಘಟಿತ ಹಾಗೂ ಆರ್ಥಿಕವಾಗಿ ಹಿಂದುಳಿದ ಮನೆಯಿಲ್ಲದವರಿಗೆ ಸೂರು ಒದಗಿಸುವ ಭರಸವಸೆಯನ್ನು ಸಿಎಂ ಯಡಿಯೂರಪ್ಪ ಕೊಟ್ಡಿದ್ದಾರೆ.

ಆನೇಕಲ್ ತಾಲ್ಲೂಕಿನ ಸರ್ಜಾಪುರ ಗ್ರಾಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಕೊಟ್ಟು ಮಾತನಾಡಿದ್ದಾರೆ.

ಕೇಂದ್ರ ಸರ್ಕಾರವು 2020-21 ರ ಬಜೆಟ್ ನಲ್ಲಿ ಬೆಂಗಳೂರು ನಗರದಲ್ಲಿ ಸಬ್ಅರ್ಬನ್ ರೈಲ್ವೆ ಕಾಮಗಾರಿ ಘೋಷಿಸಿದ್ದು, ಹುಸ್ಕೂರು, ಸಿಂಗೇನ ಅಗ್ರಹಾರ, ಬೊಮ್ಮಸಂದ್ರ ಮೊದಲಾದ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸದಂತಾಗುತ್ತದೆ ಎಂದು ಯಡಿಯೂರಪ್ಪ ಭರವಸೆ ಕೊಟ್ಟಿದ್ದಾರೆ. ಸಬರ್ಬನ್ ರೇಲ್ವೆ ಯೋಜನೆಯಿಂದಾಗಿ ರಸ್ತೆ ಸಂಚಾರ ದಟ್ಟನೆ ಶೇ. 25 ರಷ್ಟು ಕಡಿಮೆಯಾಗಲಿದೆ ಎಂದಿದ್ದಾರೆ. ರಾಜ್ಯ ಬಜೆಟ್‌ನಲ್ಲಿ ರೈತರ ಪರ ಹಾಗೂ ಪ್ರವಾಹ ಪೀಡಿತರ ಪುನಶ್ಚೇತನಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ಬಡಜನರಿಗೆ ಬಹುಮಹಡಿ ಯೋಜನೆ

ಬೆಂಗಳೂರಿನ ಬಡಜನರಿಗೆ ಬಹುಮಹಡಿ ಯೋಜನೆ

ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ಅಸಂಘಟಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಬಡವರಿಗೆ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕ ಗೃಹಮಂಡಳಿ ವತಿಯಿಂದ 21ಸಾವಿರ ನಿವೇಶನಗಳ ಅಭಿವೃದ್ಧಿ ಮತ್ತು 770 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ. ಅಲ್ಲದೇ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ 83,119 ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

ಸಂಪುಟ ವಿಸ್ತರಣೆ; ಬಂತು ಮತ್ತೊಂದು ಬ್ರೇಕಿಂಗ್ ನ್ಯೂಸ್!ಸಂಪುಟ ವಿಸ್ತರಣೆ; ಬಂತು ಮತ್ತೊಂದು ಬ್ರೇಕಿಂಗ್ ನ್ಯೂಸ್!

ಜೂನ್ ಒಳಗಾಗಿ 3.5 ಲಕ್ಷ ಗ್ರಾಮೀಣ ಮನೆಗಳ ನಿರ್ಮಾಣ

ಜೂನ್ ಒಳಗಾಗಿ 3.5 ಲಕ್ಷ ಗ್ರಾಮೀಣ ಮನೆಗಳ ನಿರ್ಮಾಣ

ರಾಜ್ಯದಲ್ಲಿ ಜಾರಿಯಲ್ಲಿರುವ ಎಲ್ಲ ವಸತಿ ಯೋಜನೆಗಳಡಿ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು 3.5 ಲಕ್ಷ ಮನೆಗಳನ್ನು ಮುಂದಿನ ಜೂನ್ ತಿಂಗಳ ಒಳಗಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಮುಂದಿನ ಆರು ತಿಂಗಳುಗಳಲ್ಲಿ ರಾಜ್ಯದಲ್ಲಿ ಸೂರಿಲ್ಲದವರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗುವುದು. ರಾಜ್ಯದಲ್ಲಿ ಜಾರಿಯಲ್ಲಿರುವ ಎಲ್ಲ ವಸತಿ ಯೋಜೆನಗಳನ್ನು ಜೂನ್ ಅಂತ್ಯಕ್ಕೆ ಪೂರ್ಣಗೊಳಿಸಲು ಸೂಚನೆ ಕೊಟ್ಟಿದ್ದೇನೆ. ಬೇರೆ ಯಾವುದೇ ಯೋಜನೆಗೆ ಹಿನ್ನೆಡೆ ಆದರೂ, ಮನೆಗಳ ನಿರ್ಮಾಣ ಯೋಜನೆಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.

ಸ್ಯಾಟಲೈಟ್ ಟೌನ್ ವರ್ತುಲ ರಸ್ತೆಯಿಂದ ಅಭಿವೃದ್ಧಿ

ಸ್ಯಾಟಲೈಟ್ ಟೌನ್ ವರ್ತುಲ ರಸ್ತೆಯಿಂದ ಅಭಿವೃದ್ಧಿ

ಬೆಂಗಳೂರಿನ ಸತ್ತಮುತ್ತಲಿನ ಪಟ್ಟಣ ಪ್ರದೇಶಗಳಿಗೆ ಅಳವಡಿಸಲು ಉದ್ದೇಶಿರುವ ಸ್ಯಾಟಲೈಟ್ ಟೌನ್ ವರ್ತುಲ ರಸ್ತೆ ಆನೇಕಲ್ ಮೂಲಕ ಹಾದು ಹೋಗಲಿದ್ದು, ಇದರಿಂದಾಗಿ ಇಲ್ಲಿನ ಜನರು ವಾಣಿಜ್ಯ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ.

ಬಿಬಿಎಂಪಿಗೆ ಹೊಂದಿಕೊಂಡಂತಿರುವ ಬೆಂಗಳೂರು ನಗರ ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಆ ಭಾಗದ ಗ್ರಾಮೀಣ ಪ್ರದೇಶಗಳಿಗೆ ಅತ್ಯುತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತ್ಯಗತ್ಯ ಎಂಬುದನ್ನು ಸರ್ಕಾರ ಮನವರಿಕೆ ಮಾಡಿಕೊಂಡಿದೆ. ಶುದ್ಧ ಕುಡಿಯುವ ನೀರು, ಅತ್ಯುತ್ತಮ ರಸ್ತೆಗಳನ್ನು ನೀಡಲು ಸರ್ಕಾರ ಕಾರ್ಯಪ್ರವೃತವಾಗಿದೆ ಎಂದರು.

ಸಂಪುಟ ವಿಸ್ತರಣೆ ಕಿರಿಕ್ : ಮೂಲ ಬಿಜೆಪಿಗರ ಅಪಸ್ವರದ ಹಿಂದೆ ಪ್ರಭಾವಿ ಕಾಂಗ್ರೆಸ್ ಮುಖಂಡರ ಕೈವಾಡ?ಸಂಪುಟ ವಿಸ್ತರಣೆ ಕಿರಿಕ್ : ಮೂಲ ಬಿಜೆಪಿಗರ ಅಪಸ್ವರದ ಹಿಂದೆ ಪ್ರಭಾವಿ ಕಾಂಗ್ರೆಸ್ ಮುಖಂಡರ ಕೈವಾಡ?

ಸಬರ್ಬನ್ ರೇಲ್ವೆಯಿಂದ ಕಡಿಮೆಯಾಗಲಿದೆ ಟ್ರಾಫಿಕ್

ಸಬರ್ಬನ್ ರೇಲ್ವೆಯಿಂದ ಕಡಿಮೆಯಾಗಲಿದೆ ಟ್ರಾಫಿಕ್

ಇದೇ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು, ಕೇಂದ್ರ ಸರ್ಕಾರವು ಮೊನ್ನೆಯ ಬಜೆಟ್ ನಲ್ಲಿ ಬೆಂಗಳೂರು ನಗರಕ್ಕೆ ಸಬರ್ಬನ್ ರೈಲ್ವೆ ಯೋಜನೆ ಜಾರಿಗೆ ತಂದಿದೆ. ಸಬರ್ಬನ್ ರೈಲ್ವೆ ಯೋಜನೆಯಿಂದಾಗಿ ರಸ್ತೆ ಸಂಚಾರ ದಟ್ಟನೆ ಶೇ. 25 ರಷ್ಟು ಕಡಿಮೆಯಾಗಲಿದೆ ಎಂದಿದ್ದಾರೆ. ರಾಜ್ಯ ಬಜೆಟ್‌ನಲ್ಲಿ ರೈತರ ಪರ ಹಾಗೂ ಪ್ರವಾಹ ಪೀಡಿತರ ಪುನಶ್ಚೇತನಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್, ಎಂ.ಸತೀಶ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು ಉಪಸ್ಥಿತರಿದ್ದರು.

English summary
Chief Minister B.S. Yeddyurappa announces housing scheme for the economically backward class people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X