ಮೋದಿ ಆಗಮನ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು, ಫೆಬ್ರವರಿ 02 : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು.

ಫೆಬ್ರವರಿ 4 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ, ಅಂದು ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಅಮಾವೇಶದ ಸಮಾರೋಪ ಕಾರ್ಯಕ್ರಮವೂ ಕೂಡ ಜರುಗಲಿದೆ. ಅಂದು ಪ್ರಧಾನಿ ಅಗಮನ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಬೆಂಗಳೂರು ಬಂದ್ ಗೆ ಕರೆ ನೀಡಿದ್ದಾರೆ.

ಇದೆಲ್ಲದರ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಕೈಗೊಂಡಿರುವ ವೇದಿಕೆ ನಿರ್ಮಾಣ ಕಾಮಗಾರಿ ಹಾಗೂ ಉಳಿದಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಾಥ್ ನೀಡಿದರು.

Yeddyurappa inspects Modi rally preparations
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+