ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಸ್‌ವೈ ಆಪ್ತ ಸಂತೋಷ್, ಬಿಜೆಪಿ ಮುಖಂಡ ಸಿ.ಪಿ.ಯೋಗೀಶ್ವರ್‌ಗೆ ಸಂಕಷ್ಟ

|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ಆಪ್ತ ಹಾಗು ಸಿ ಪಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಎಚ್ ಡಿ ಕೆ

ಬೆಂಗಳೂರು, ಜುಲೈ 16: ನಿನ್ನೆ ತಡ ರಾತ್ರಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿಯು ಮಾಜಿ ಸಚಿವ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಆದರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ಮತ್ತು ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರಿಗೂ ಸಂಕಷ್ಟ ಎದುರಾಗಿದೆ.

ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು, ಅವರ ಟ್ವೀಟ್‌ನಲ್ಲಿ ರೋಷನ್ ಬೇಗ್‌ ಅವರ ವಿಮಾನದ ಟಿಕೆಟ್ ಚಿತ್ರವನ್ನು ಲಗತ್ತಿಸಲಾಗಿದೆ. ಅದರಲ್ಲಿ ರೋಷನ್ ಬೇಗ್ ಜೊತೆಗೆ ಯಡಿಯೂರಪ್ಪ ಅವರ ಆಪ್ತ ಸಂತೋಶ್ ಅವರ ಹೆಸರೂ ಸಹ ಇದೆ.

ಐಎಂಎ ಹಗರಣ : ರೋಷನ್ ಬೇಗ್ ಎಸ್‌ಐಟಿ ವಶಕ್ಕೆಐಎಂಎ ಹಗರಣ : ರೋಷನ್ ಬೇಗ್ ಎಸ್‌ಐಟಿ ವಶಕ್ಕೆ

ಘಟನೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಕುಮಾರಸ್ವಾಮಿ, ಎಸ್‌ಐಟಿ ತಂಡವು ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆಯಲು ಹೋದಾಗ ಅವರ ಜೊತೆ ಇದ್ದ ಸಂತೋಶ್ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Yeddyurappa PA Santhosh and BJP leader CP Yogeshwar may get notice from SIT

ಸಂತೋಶ್ ಮಾತ್ರವಲ್ಲದೆ ಆಗ ಸ್ಥಳದಲ್ಲಿ ಬಿಜೆಪಿ ಮಾಜಿ ಶಾಸಕ ಸಿಪಿ.ಯೋಗೀಶ್ವರ್ ಅವರು ಸಹ ಉಪಸ್ಥಿತರಿದ್ದರು ಎಂದು ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವರು ಪರಾರಿಯಾಗಲು ಬಿಜೆಪಿಯು ಸಹಕರಿಸುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ಮೂದಲಿಸಿದ್ದಾರೆ.

ಬಿಜೆಪಿಯು 'ಕುದುರೆ ವ್ಯಾಪಾರದ' ಮೂಲಕ ಸರ್ಕಾರವನ್ನು ಅಲುಗಾಡಿಸಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ವಿಚಾರ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಎಚ್ಡಿಕೆ ವಿಶ್ವಾಸಮತ ಯಾಚನೆಗೂ ಮುನ್ನ ವಿಧಾನಸಭೆ ಸಂಖ್ಯಾಬಲವೇನು? ಎಚ್ಡಿಕೆ ವಿಶ್ವಾಸಮತ ಯಾಚನೆಗೂ ಮುನ್ನ ವಿಧಾನಸಭೆ ಸಂಖ್ಯಾಬಲವೇನು?

ಆರೋಪಿ ಪರಾರಿಗೆ ಸಹಾಯ ಮಾಡಿದ ಆರೋಪದಲ್ಲಿ ಯಡಿಯೂರಪ್ಪ ಪಿಎ ಸಂತೋಶ್ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಎಸ್‌ಐಟಿಯು ನೊಟೀಸ್ ನೀಡುವ ಸಾಧ್ಯತೆ ಇದೆ.

English summary
Yeddyurappa PA Santhosh and BJP leader CP Yogeshwar may get notice from SIT which investigating IMA scam case. Yesterday night while SIT detaining Roshan Baig BSY PA Santhosh and CP Yogeshwar present there.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X