ಮಾತುಕತೆಗೆ ಕರೆದಿಲ್ಲ : ಸಿದ್ದು ವಿರುದ್ಧ ಬಿಎಸ್ವೈ ಆರೋಪ
ಬೆಂಗಳೂರು,ನ. 18 : ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೆಜೆಪಿ ಅಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಕ್ಕೆ ಅಂಟಿಕೊಂಡು ಕುಳಿತಿರುವ ಸಿದ್ದರಾಮಯ್ಯ, ತಾವು ಧರಣಿ ನಡೆಸುತ್ತಿದ್ದರೂ ಮಾತುಕತೆ ನಡೆಸುವ ಸೌಜನ್ಯವನ್ನು ತೋರಿಲ್ಲ ಎಂದು ಆರೋಪಿಸಿದ್ದಾರೆ.
ಆನಂದ್ ರಾವ್ ವೃತ್ತದ ಧರಣಿ ಸ್ಥಳದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಅಂಟಿಕೊಂಡು ಕುಳಿತಿದ್ದಾರೆ. ಪ್ರತಿಪಕ್ಷಗಳ ಮಾತಿಗೆ ಅವರು ಮನ್ನಣೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಧರಣಿ ನಿತರ ಸಮಸ್ಯೆ ಆಲಿಸುವಷ್ಟು ಸಮಯ ಅವರ ಬಳಿ ಇಲ್ಲ, ಇದು ಪ್ರತಿಪಕ್ಷಗಳನ್ನು ಅವರು ಕಡೆಗಣಿಸುತ್ತಿರುವುದಕ್ಕೆ ಸಾಕ್ಷಿ ಎಂದರು.

ಅ.31 ರಿಂದ ಶಾದಿಭಾಗ್ಯ ಯೋಜನೆ ವಿಸ್ತರಣೆ ಹಾಗೂ ಎಪಿಎಲ್ ಕಾರ್ಡ್‌ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇನೆ. ಆದರೆ, ಸಿಎಂ ಸಿದ್ದರಾಮಯ್ಯ ಸೌಜನ್ಯಕ್ಕೂ ಕರೆದು ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಆರೋಪಿಸಿದರು. ನ.24ರ ವರೆಗೆ ಧರಣಿ ಮುಂದುವರೆಸಿ, ನಂತರ ನ.25 ರಿಂದ ಬೆಳಗಾವಿ ಅಧಿವೇಶನದಲ್ಲಿಯೂ ಧರಣಿ ಮುಂದುವರೆಸುತ್ತೇನೆ ಎಂದು ಯಡಿಯೂರಪ್ಪ ಘೋಷಿಸಿದರು. (ನ.24ರವರೆಗೆ ಧರಣಿ ವಿಸ್ತರಣೆ)
ಅವರ ಧರಣಿ ಪ್ರಚಾರಕ್ಕಾಗಿ : ಯಡಿಯೂರಪ್ಪ ಧರಣಿ ಬಗ್ಗೆ ನವದೆಹಲಿಯಲ್ಲಿರುವ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಶಾದಿ ಭಾಗ್ಯ ಯೋಜನೆಯನ್ನು ಸಮಾಜದ ಎಲ್ಲ ಬಡವರಿಗೂ ವಿಸ್ತರಿಸುವಂತೆ ಒತ್ತಾಯಿಸಿ ಅವರು ನಡೆಸುತ್ತಿರುವ ಧರಣಿ ಕೇವಲ ಪ್ರಚಾರ ತಂತ್ರ ಎಂದು ಆರೋಪಿಸಿದರು.
ಸರ್ಕಾರ ಬಜೆಟ್ ಮಂಡಿಸುವಾಗಲೇ ಶಾದಿ ಭಾಗ್ಯ ಯೋಜನೆ ಬಗ್ಗೆ ಉಲ್ಲೇಖಿಸಲಾಗಿತ್ತು. ಆಗ ವಿಧಾನಸೌಧದಲ್ಲಿ ಯಡಿಯೂರಪ್ಪ ಉಪಸ್ಥಿತರಿದ್ದರು. ಆಗ ಅವರು ಯೋಜನೆ ಕುರಿತು ಏಕೆ ಪ್ರಸ್ತಾಪಿಸಿಲ್ಲ ಎಂದು ಸಿಎಂ ಪ್ರಶ್ನಿಸಿದರು. ಸದ್ಯ ಅಧಿಕಾರ ಕಳೆದುಕೊಂಡಿದ್ದರಿಂದ ಯಡಿಯೂರಪ್ಪ ಅವರಿಗೆ ಬಡವರ ನೆನಪಾಗುತ್ತಿದೆ. ಆದ್ದರಿಂದ ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಸಮರ್ಥನೆ ನೀಡಿದರು.
ಶಾದಿ ಭಾಗ್ಯ, ಮೂಡನಂಬಿಕೆ ನಿಷೇಧ ವಿಧೇಯಕ ಸೇರಿದಂತೆ ಪ್ರತಿಕ್ಷಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೂ ನ.25ರಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ಉತ್ತರ ನೀಡಲಿದೆ. ಅದನ್ನು ಶಾಂತಿಯಿಂದ ಕುಳಿತು ಕೇಳಿಸಿಕೊಳ್ಳುವ ತಾಳ್ಮೆ ಅವರಿಗೆ ಇರಬೇಕು ಎಂದು ಸಿದ್ದರಾಮಯ್ಯ ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications