ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಶಿಷ್ಟ ಪಂಗಡಕ್ಕೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

|
Google Oneindia Kannada News

Recommended Video

ಪರಿಶಿಷ್ಟ ಪಂಗಡಕ್ಕೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿ | Oneindia Kannada

ಬೆಂಗಳೂರು, ಸೆಪ್ಟೆಂಬರ್ 10: ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಪ್ರಮಾಣದ ಹೆಚ್ಚಳಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಎಸ್‌ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇ 7.5ರಷ್ಟು ಹೆಚ್ಚಳ ಮಾಡುವ ಬೇಡಿಕೆ ಸಂಬಂಧ ತಜ್ಞರ ಸಮಿತಿ ರಚಿಸಲು ಯಡಿಯೂರಪ್ಪ ಮುಂದಾಗಿದ್ದಾರೆ.

ಕುಮಾರಸ್ವಾಮಿ ಅಲ್ಲ, ಅವರಪ್ಪನೂ ಮಾತು ಕೇಳಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿಕುಮಾರಸ್ವಾಮಿ ಅಲ್ಲ, ಅವರಪ್ಪನೂ ಮಾತು ಕೇಳಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡುವ ಕುರಿತು, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದ ನಿಯೋಗವು ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕು. ವಿಧಾನಸೌಧದ ಮುಂದೆ ಹಾವನೂರರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಕೋರಿದರು.

ಐದು ದಶಕಗಳಿಂದ ಮೀಸಲಾತಿಯ ಏರಿಕೆಗೆ ಬೇಡಿಕೆ ಇರಿಸಲಾಗುತ್ತಿದೆ. ಶೇ 7,5ಕ್ಕೆ ಮೀಸಲಾತಿ ಹೆಚ್ಚಿಸಲು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಕ್ಷಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಿ

ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಿ

'ಮೀಸಲಾತಿ ಪ್ರಮಾಣವನ್ನು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕು. ಜಾತಿಯ ನಕಲಿ ಪ್ರಮಾಣ ಪತ್ರ ಪಡೆದುಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಸಮುದಾಯಕ್ಕೆ ಸೇರಿದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಜತೆಗೆ ಮತ್ತಷ್ಟು ಸಚಿವ ಸ್ಥಾನಗಳನ್ನು ನೀಡಬೇಕು' ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ವಿವಿಧ ಬೇಡಿಕೆಗಳನ್ನು ಇರಿಸಿದರು.

ಯಾವ ಸರ್ಕಾರವೂ ಸ್ಪಂದಿಸಲಿಲ್ಲ

ಯಾವ ಸರ್ಕಾರವೂ ಸ್ಪಂದಿಸಲಿಲ್ಲ

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 7ರಷ್ಟು ವಾಲ್ಮೀಕಿ ಸಮುದಾಯದ ಜನಸಂಖ್ಯೆ ಇದೆ. ಈ ಹಿಂದೆ ಶೇ 3ರಷ್ಟು ಮೀಸಲಾತಿ ನೀಡಲಾಗಿತ್ತು. ಅದು ಇಂದಿನ ಜನಸಂಖ್ಯೆಗೆ ಸಾಕಾಗುವಷ್ಟಿಲ್ಲ. ಹಿಂದಿನ ಸರ್ಕಾರಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾರೂ ನಮಗೆ ಸ್ಪಂದಿಸಿಲ್ಲ. ಸ್ವಾಮೀಜಿಯವರ ನೇತೃತ್ವದಲ್ಲಿ ಕಾಲ್ನಡಿಗೆಯಲ್ಲಿ ರಾಜನಹಳ್ಳಿಯಿಂದ ಬೆಂಗಳೂರುವರೆಗೆ ಜಾಥಾ ನಡೆಸಲಾಗಿತ್ತು. ಅದಕ್ಕೂ ಸರ್ಕಾರ ಕಿವಿಗೊಡಲಿಲ್ಲ ಎಂದು ನಿವೃತ್ತ ಐಎಎಸ್ ಅಧಿಕಾರಿ ಮೃತ್ಯುಂಜಯ ಅವರು ಆರೋಪಿಸಿದರು.

ಸ್ವಾಮೀಜಿ ಆದೇಶಿಸಿದರೆ ಇದೇ ವೇದಿಕೆಯಲ್ಲಿ ರಾಜೀನಾಮೆ: ಶ್ರೀರಾಮುಲುಸ್ವಾಮೀಜಿ ಆದೇಶಿಸಿದರೆ ಇದೇ ವೇದಿಕೆಯಲ್ಲಿ ರಾಜೀನಾಮೆ: ಶ್ರೀರಾಮುಲು

ಸಮಿತಿ ರಚನೆಯ ಭರವಸೆ

ಸಮಿತಿ ರಚನೆಯ ಭರವಸೆ

ನಿಯೋಗದ ಮನವಿ ಆಲಿಸಿ ಸ್ಪಂದಿಸಿದ ಯಡಿಯೂರಪ್ಪ, ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವ ಸಲುವಾಗಿ ಸಮಿತಿಯೊಂದನ್ನು ರಚಿಸಲಾಗುವುದು. ಬಳಿಕ ಸಮಿತಿ ನೀಡುವ ವರದಿಯನ್ನು ಸಚಿವ ಸಂಪುಟದ ಮುಂದೆ ಕೂಡ ತಂದು ಸಮಗ್ರವಾಗಿ ಚರ್ಚಿಸಲಾಗುವುದು. ಆನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ವಾಲ್ಮೀಕಿ ಸಮುದಾಯದ ಅನುಕೂಲಕ್ಕೆ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಆದಷ್ಟು ಶೀಘ್ರವೇ ವರದಿ

ಆದಷ್ಟು ಶೀಘ್ರವೇ ವರದಿ

ನಾಗಮೋಹನ ದಾಸ್ ವರದಿ ಮತ್ತು ಹೊಸ ಸಮಿತಿಯ ವರದಿ ಎರಡನ್ನೂ ಇರಿಸಿಕೊಂಡು ಒಂದು ತೀರ್ಮಾನ ತೆಗೆದುಕೊಳ್ಳೋಣ. ನಿಮ್ಮ ಬೇಡಿಕೆ ನ್ಯಾಯಸಮ್ಮತವಾಗಿದೆ. ಅದನ್ನು ಆದಷ್ಟು ಬೇಗನೆ ಈಡೇರಿಸಲು ಪ್ರಯತ್ನಿಸುತ್ತೇನೆ. ಆದಷ್ಟು ಶೀಘ್ರವೇ ಹೊಸ ಸಮಿತಿ ರಚಿಸಿ ಬೇಗ ವರದಿ ನೀಡುವಂತೆ ಸೂಚನೆ ನೀಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ವಾಲ್ಮೀಕಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆವಾಲ್ಮೀಕಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

English summary
Chief Minister BS Yediyurappa assured a delegation of Valmiki Gurupeetha Prasannananda Puri Swamiji to form a committee to increase the reservation of ST to 7.5%.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X