ಗೆಳೆಯನ ನೆನೆದು ಭಾವುಕರಾದ ಸಿಎಂ ಯಡಿಯೂರಪ್ಪ
Recommended Video
ಬೆಂಗಳೂರು, ಸೆಪ್ಟೆಂಬರ್ 23: ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್‌ಕುಮಾರ್ ಅವರ 60ನೇ ಜನ್ಮ ದಿನ ನಿಮಿತ್ತ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಗೆಳೆಯನ ನೆನೆದು ಭಾವುಕರಾದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರಲು ಮತ್ತು ನಾನು ವೈಯಕ್ತಿಕವಾಗಿ ಇಷ್ಟು ಪ್ರಗತಿ ಸಾಧಿಸಲು ಅನಂತ್‌ಕುಮಾರ್ ಅವರ ಕೊಡುಗೆ ಅಪಾರವಾಗಿದೆ ಎಂದು ಅವರು ಹೇಳಿದರು.
ಅನಂತ್‌ಕುಮಾರ್ ಅವರೊಂದಿಗಿನ ಹಳೆಯ ದಿನಗಳನ್ನು ನೆನಪಿಸಿಕೊಂಡ ಯಡಿಯೂರಪ್ಪ, 'ಜನಸಂಘದ ಕಾಲದಿಂದಲೂ ನಾನು ಮತ್ತು ಅನಂತ್‌ಕುಮಾರ್ ರಾಜ್ಯದಲ್ಲಿ ಪಕ್ಷ ಕಟ್ಟಲು ಸಂಘಟನೆ ಮಾಡಿದ್ದೆವು' ಎಂದು ಹೇಳಿದರು.

'ಪ್ರತಿದಿನವೂ ಪ್ರವಾಸವನ್ನು ನಾವು ನಿಗದಿ ಮಾಡಿಕೊಳ್ಳುತ್ತಿದ್ದೆವು, ನಮಗೆ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ ಅವರುಗಳು ಬೆಂಬಲ ನೀಡುತ್ತಿದ್ದರು, ಆ ದಿನಗಳಲ್ಲಿ ನನ್ನ ನೆಚ್ಚಿನ ಒಡನಾಡಿ ಅನಂತ್‌ಕುಮಾರ್ ಆಗಿದ್ದರು, ರಾಜ್ಯಕ್ಕೆ ಅವರ ಅವಶ್ಯಕತೆ ಇತ್ತು' ಎಂದು ಅವರು ಹೇಳಿದರು.
ಅನಂತ್‌ಕುಮಾರ್ ಅವರ ಹಲವು ವೈಶಿಷ್ಟ್ಯತೆಗಳನ್ನು ಹೇಳಿದ ಯಡಿಯೂರಪ್ಪ, 'ಅನಂತ್‌ಕುಮಾರ್ ಅವರ ನೆನಪಿನ ಶಕ್ತಿ ಅಗಾಧವಾಗಿತ್ತು, ಅವರು ಕೇವಲ ಐದು ನಿಮಿಷಗಳಲ್ಲಿ ನನಗೆ ಭಾಷಣ ತಯಾರು ಮಾಡಿಕೊಟ್ಟುಬಿಡುತ್ತಿದ್ದರು' ಎಂದು ಹೇಳಿದರು.
ಅನಂತ್‌ಕುಮಾರ್ ಅವರ ಬಹುಕಾಲದ ಗೆಳೆಯ ಸದಾನಂದಗೌಡ ಅವರೂ ಸಹ ಅನಂತ್‌ಕುಮಾರ್ ಅವರೊಂದಿಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು.
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ.ನಡ್ಡಾ, ಅನಂತ್‌ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್‌ಕುಮಾರ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇನ್ನೂ ಹಲವು ಬಿಜೆಪಿ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications