ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನ್ನಭಾಗ್ಯ ರದ್ದುಪಡಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

|
Google Oneindia Kannada News

Recommended Video

ಅನ್ನಭಾಗ್ಯ ಯೋಜನೆ ಬಗ್ಗೆ ಮಾತನಾಡಿದ್ದರು ಸಿದ್ದರಾಮಯ್ಯ | Oneindia Kannada

ಬೆಂಗಳೂರು, ಆಗಸ್ಟ್ 17: ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆ 'ಅನ್ನ ಭಾಗ್ಯ ಯೋಜನೆ'ಯನ್ನು ರದ್ದುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಮೈತ್ರಿ ಸರ್ಕಾರದ ಆಡಳಿತದ ಸಂದರ್ಭದಲ್ಲಿ ಜಾರಿಗೆ ತಂದ ವಿವಿಧ ಜನಪ್ರಿಯ ಯೋಜನೆಗಳಿಗೆ ರಾಜ್ಯ ಸರ್ಕಾರ ಕತ್ತರಿ ಹಾಕಲು ಮುಂದಾಗಿದ್ದಾರೆ ಎನ್ನಲಾಗಿತ್ತು. ಬಡವರಿಗೆ ಅನುಕೂಲ ಮಾಡಿಕೊಡುವ ಅನ್ನಭಾಗ್ಯ ಯೋಜನೆಗೂ ಅವರು ಅಕ್ಕಿ ಪ್ರಮಾಣದಲ್ಲಿ ಕಡಿತ ಮಾಡುವ ಮೂಲಕ ಕೊಕ್ಕೆ ಹಾಕಲಿದ್ದಾರೆ ಎಂದು ವರದಿಯಾಗಿತ್ತು. ಇದರ ವಿರುದ್ಧ ಸಿದ್ದರಾಮಯ್ಯ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಸಿದ್ದರಾಮಯ್ಯ ಯೋಜನೆಗಳಿಗೆ ಯಡಿಯೂರಪ್ಪ ಕತ್ತರಿಸಿದ್ದರಾಮಯ್ಯ ಯೋಜನೆಗಳಿಗೆ ಯಡಿಯೂರಪ್ಪ ಕತ್ತರಿ

ಆದರೆ, ಈ ಆರೋಪಗಳಿಗೆ ಯಡಿಯೂರಪ್ಪ ಸ್ಪಷ್ಟೀಕರಣ ನೀಡಿದ್ದಾರೆ. ಅನ್ನಭಾಗ್ಯ ಸೇರಿದಂತೆ ಜನಪರ ಯೋಜನೆಗಳನ್ನು ರದ್ದುಪಡಿಸುವ ಉದ್ದೇಶ ಇಲ್ಲ ಎಂದು ಅವರು ತಿಳಿಸಿದ್ದಾರೆ.

Yediyurappa Clarified No Plans To Scrap Annabhagya Scheme

ಯಾವುದೇ ಜನಪರ ಯೋಜನೆಗಳನ್ನು ರದ್ದುಗೊಳಿಸುವ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಮುಂದುವರಿಸಲು ಈಗಾಗಲೇ ಅನುದಾನ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದ್ದೇನೆ ಎಂದು ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಭವಿಷ್ಯ ಇಂದು ನಿರ್ಧಾರ: ಇರುತ್ತಾ? ಇರಲ್ವಾ?ಇಂದಿರಾ ಕ್ಯಾಂಟೀನ್ ಭವಿಷ್ಯ ಇಂದು ನಿರ್ಧಾರ: ಇರುತ್ತಾ? ಇರಲ್ವಾ?

ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ಪತ್ರಿಕಾ ಹೇಳಿಕೆಯನ್ನು ಸಹ ಬಿಡುಗಡೆ ಮಾಡಿದ್ದಾರೆ.

Yediyurappa Clarified No Plans To Scrap Annabhagya Scheme

'ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ. ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ' ಎಂದು ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

English summary
Chief Minister BS Yediyurappa gave clarification about the news of scrapping Annabhagya scheme said that Our govt has no plans to scrap any of the pro-people schemes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X