ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಲಾಕ್‌ಡೌನ್ ಕುರಿತು ಯಡಿಯೂರಪ್ಪ ಅಚ್ಚರಿ ಹೇಳಿಕೆ

|
Google Oneindia Kannada News

ಬೆಂಗಳೂರು, ಜೂನ್ 26: ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Recommended Video

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದ ಮುಖ್ಯಮಂತ್ರಿಗಳು | BS Yediyurappa | Bengaluru

ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದ ಆರ್ಥಿಕ ಸುಧಾರಣೆ ಮುಖ್ಯವಾಗಿದೆ. ಕೊವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ವ ಪಕ್ಷ ಶಾಸಕರ ಸಭೆ ಕರೆದಿದ್ದೇನೆ. ಅವರವರ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರಮ ಕೈಗೊಳ್ಳಬೇಕು.

ಆನ್‌ಲೈನ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಭೇಟಿ ಹೇಗೆ?: ಇಲ್ಲಿದೆ ಮಾಹಿತಿಆನ್‌ಲೈನ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಭೇಟಿ ಹೇಗೆ?: ಇಲ್ಲಿದೆ ಮಾಹಿತಿ

Yediyurappa Declared There Will Be No Lockdown In Bengaluru

ವಿಪಕ್ಷಗಳ ಸಲಹೆಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ದೇಶದಲ್ಲೇ ಬೆಂಗಳೂರು ಮಾದರಿಯಾಗಿದೆ. ನಾವು ಯಾಸ್ವಿಯಾಗಿದ್ದೇವೆ, ಆದರೆ ಕೆಲವು ದಿನಗಳಿಂದ ಸೋಂಕು ಹೆಚ್ಚಳವಾಗುತ್ತಿದೆ. ಪ್ರತಿಯೊಬ್ಬ ಶಾಸಕರು, ಸಚಿವ ಸಭೆ ಕರೆಯಲಾಗಿದೆ. ಎಲ್ಲರೂ ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ಕಡೆಗೆ ಗಮನ ನೀಡಬೇಕು.

ರಾಜ್ಯದ ಆರ್ಥಿಕತೆಯೂ ಮುಖ್ಯವಾಗಿರುವ ಕಾರಣ ಯಾವುದೇ ಕಾರಣಕ್ಕೂ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ, ಕೆಲವು ಪ್ರದೇಶಗಳನ್ನು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ. ಉಳಿದ ಪ್ರದೇಶಗಳಲ್ಲಿ ಸಂಚಾರ ಎಂದಿನಂತೆಯೇ ಇರಲಿದೆ. ಇದಕ್ಕೆ ಶಾಸಕರು, ಸಚಿವರು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ಹೊಸದಾಗಿ 113 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1791 ಪ್ರಕರಣಗಳಿವೆ. ಗುರುವಾರ 30 ಮಂದಿ ಬಿಡುಗಡೆಹೊಂದಿದ್ದಾರೆ, ಒಟ್ಟಾರೆ 505 ಮಂದಿ ಗುಣಮುಖರಾಗಿದ್ದಾರೆ. 1207 ಪ್ರಕರಣಗಳು ಸಕ್ರಿಯವಾಗಿವೆ.

English summary
Karnataka Chief Minister BS Yediyurappa Declared That there will be no lockdown in Bengaluru in the concern of economic crisis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X