• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಸಕ ನಾರಾಯಣರಾವ್ ನಮ್ಮನ್ನು ಅಗಲಿರುವುದು ಮತ್ತೊಂದು ಆಘಾತ!

|

ಬೆಂಗಳೂರು, ಸೆ. 24: ಶಾಸಕ ಬಿ. ನಾರಾಯಣರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಿನ್ನೆಯಷ್ಟೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಕಳೆದುಕೊಂಡಿರುವ ದುಃಖದಿಂದ ಚೇತರಿಸಿಕೊಳ್ಳುವ ಮುನ್ನವೇ ಶಾಸಕ ಬಿ. ನಾರಾಯಣರಾವ್ ಅವರು ನಮ್ಮನ್ನು ಅಗಲಿರುವುದು ಮತ್ತೊಂದು ಆಘಾತ ತಂದಿದೆ ಎಂದಿದ್ದಾರೆ.

2018ರ ವಿಧಾನಸಭೆಯ ಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಿ ನಾರಾಯಣರಾವ್ ಅವರು ಗೆಲುವು ಸಾಧಿಸಿದ್ದರು. ವಿಧಾನಸಭೆಯಲ್ಲಿ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಿದ್ದ ಅವರು ಅಸಾಧಾರಣ ವಾಗ್ಮಿಗಳಾಗಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದು, ಬಸವಕಲ್ಯಾಣ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಅತ್ಯುತ್ತಮ ಶಾಸಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಬಲಿ

ಮೃತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ. ನಾರಾಯಣರಾವ್: ಬಸವ ಕಲ್ಯಾಣ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಇಂದು ಮಧ್ಯಾಹ್ನ 3.55ಕ್ಕೆ ನಿಧನರಾಗಿದ್ದಾರೆ.

ಸಿದ್ದರಾಮಯ್ಯ ಆಪ್ತ ಬಿ. ನಾರಾಯಣರಾವ್ ಪರಿಚಯ

ಕಳೆದ ಸೆಪ್ಟೆಂಬರ್ 1 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಆಗಸ್ಟ್ 30 ರಂದು ನಾರಾಯಣ ರಾವ್ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಸೆಪ್ಟೆಂಬರ್ 1ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ನಂತರ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ಇತ್ತು. ಅವರು ಆಸ್ಪತ್ರೆಗೆ ದಾಖಲಾದ ಎರಡೇ ದಿನಕ್ಕೆ ಅವರ ಸ್ಥಿತಿ ಗಂಭೀರವಾಗಿತ್ತು. ಅಂದಿನಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

English summary
Chief Minister BS Yediyurappa expressed his condolences to basava kalyana MLA B Narayana Rao's death,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X