ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು ಕೊರೊನಾದಿಂದ ಮೃತರಾದರೆ 30 ಲಕ್ಷ ಪರಿಹಾರ

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ಹಾಗೂ ನಾಗರಿಕ ಸೇವೆಯಲ್ಲಿರುವವರು ಕೊರೊನಾ ವೈರಸ್‌ನಿಂದ ಮೃತರಾದರೆ, ಅವರಿಗೆ ಸರ್ಕಾರ ಪರಿಹಾರ ಹಣ ನೀಡಲಿದೆ.

ಕೊರೊನಾ ವೈರಸ್‌ ತಗುಲಿ ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ಹಾಗೂ ನಾಗರಿಕ ಸೇವೆಯಲ್ಲಿರುವವರು ಮರಣ ಹೊಂದಿದರೆ. ಸರ್ಕಾರ ಅವರ ಕುಟುಂಬಕ್ಕೆ ಹಣಕಾಸಿನ ನೆರವು ನೀಡಲಿದೆ. 30 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Yediyurappa Has Announced Compensation For Anganwadi Workers Civil Workers And Police

ಆಟೋ, ಕ್ಯಾಬ್ ಚಾಲಕರ ಖಾತೆಗೆ ₹ 5 ಸಾವಿರ: ಸಿಎಂ ಯಡಿಯೂರಪ್ಪ ಭರವಸೆ ಆಟೋ, ಕ್ಯಾಬ್ ಚಾಲಕರ ಖಾತೆಗೆ ₹ 5 ಸಾವಿರ: ಸಿಎಂ ಯಡಿಯೂರಪ್ಪ ಭರವಸೆ

ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ಹಾಗೂ ನಾಗರಿಕ ಸೇವೆಯಲ್ಲಿರುವವರು ಮೃತರಾದರೆ, ಸರ್ಕಾರ ಪರಿಹಾರ ಹಣವನ್ನು ಕುಟುಂಬಕ್ಕೆ ನೀಡಲಾಗುತ್ತದೆ.

ಕೊರೊನಾ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿರುವ ಆಶಾ ಕಾರ್ಯಕರ್ತೆಯರು, ಪೊಲೀಸರು ಹಾಗೂ ನಾಗರಿಕ ಸೇವೆಯಲ್ಲಿರುವವರ ಕರ್ತವ್ಯವನ್ನು ಗಮನಿಸಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕೊರೊನಾ ಓಡಿಸಲು ಈ ವರ್ಗ ಹಗಲಿರುಳು ದುಡಿಯುತ್ತಿದೆ.

ಅಂದಹಾಗೆ, ಕಳೆದ ಒಂದು ದಿನದಲ್ಲಿ ರಾಜ್ಯದಲ್ಲಿ 30 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಈಗ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ.

English summary
Chief Minister BS Yediyurappa has announced Rs 30 lakhs compensation for Anganwadi workers, civil workers, and police personnel who die after getting infected by COVID19 while carrying out their duties.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X