• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯುಎಸ್ ಕಾನ್ಸುಲೇಟ್ ಜನರಲ್ ಜತೆ ಯಡಿಯೂರಪ್ಪ ವರ್ಚುವಲ್ ಸಭೆ

|

ಬೆಂಗಳೂರು, ಸೆಪ್ಟೆಂಬರ್ 16: ಯು.ಎಸ್ ಕಾನ್ಸುಲೇಟ್ ಜನರಲ್ ಜ್ಯುಡಿತ್ ರೇವಿನ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ವರ್ಚುಯಲ್ ಸಭೆ ನಡೆಸಿದರು. ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸುಲೇಟ್ ಜನರಲ್ ಆಗಿ ಜ್ಯುಡಿತ್ ರೇವಿನ್ ಸೆಪ್ಟೆಂಬರ್ 6 ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಸಭೆಯಲ್ಲಿ ಕರ್ನಾಟಕ ರಾಜ್ಯ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸಹಯೋಗ, ಭಾರತ-ಅಮೆರಿಕ ವಾಣಿಜ್ಯ ಸಂಬಂಧ, ಕೊವಿಡ್ ಸಂದರ್ಭದಲ್ಲಿ ಆರೋಗ್ಯ ಸೇವೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು.

ಕೊವಿಡ್ ಸಾಂಕ್ರಾಮಿಕದ ಈ ಸಂಕಷ್ಟದ ಹೊತ್ತಿನಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕವನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತ-ಅಮೆರಿಕ ಕೊರೊನಾ ಸಂಕಷ್ಟದ ಕುರಿತು ಇಂದು ಮಾತುಕತೆ ನಡೆಯಿತು. ಚೆನ್ನೈಗೆ ಆಗಮಿಸುವ ಮುನ್ನ ರೇವಿನ್ ಅವರು ಪೆರುವಿನ ಲಿಮಾದಲ್ಲಿ ಪಬ್ಲಿಕ್ ಅಫೇರ್ಸ್ ಕೌನ್ಸುಲರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಅದಕ್ಕೂ ಮುನ್ನ ವಾಷಿಂಗ್ಟನ್ ಡಿಸಿಯಲ್ಲಿ ಹೈಟಿ ವಿಶೇಷ ಸಂಯೋಜನಾಧಿಕಾರಿಯವರ ಕಚೇರಿಯಲ್ಲಿ ಇಂಟರ್‌ನ್ಯಾಷನಲ್ ರಿಲೇಷನ್ಸ್ ಜನರಲ್ ಆಗಿದ್ದರು. ಹಾಗೆಯೇ ಪಾಕಿಸ್ತಾನದ ಇಸ್ಲಾಮಾಬಾದ್, ಡೊಮಿನಿಕನ್ ರಿಪಬ್ಲಿಕನ್ ಸ್ಯಾಂಟೊ ಡೊಮಿಂಗೊ, ಸೂಡಾನ್ ನ ಖರ್ತೋಂ, ಕ್ಯಾಮರೂನ್ನ ಯುವಾಂಡೆ ಹಾಗೂ ಮೆಕ್ಸಿಕೊದ ಸಿಯುಡಾಡ್‌ನ ಜುವಾರೆನ್‌ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

   RCB ಈ ಸಲ ಕಪ್ ಗೆದ್ದೇ ಗೆಲ್ತಾರೆ , ಯಾಕೆ ಗೊತ್ತಾ | Oneindia Kannada

   ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ. ವಿ.ರಮಣರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.

   English summary
   Karnataka Chief Minister BS Yediyurappa Holds Virtual meeting with US Consulate General Judith Ravin, In the meeting they discussed about state, aerospace, India-america commercial relationship and health services.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X