'ಯಡಿಯೂರಪ್ಪ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ'
ಬೆಂಗಳೂರು, ಜುಲೈ 30: 'ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷ ಅಧಿಕಾರದಲ್ಲಿರುತ್ತಾರೆ. ಮುಂದಿನ ಚುನಾವಣೆಯನ್ನು ಅವರ ನಾಯಕತ್ವದಲ್ಲಿಯೇ ಎದುರಿಸುತ್ತೇವೆ' ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದು, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
Recommended Video
'ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದೆ. ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕ' ಎಂದು ಗುರುವಾರ ಬೆಳಗ್ಗೆ ವಿಧಾನಸೌಧದಲ್ಲಿ ಸೋಮಣ್ಣ ಘೋಷಿಸಿದರು.
'ಯಡಿಯೂರಪ್ಪ ಹೆಸರಿನಲ್ಲಿಯೇ ಪ್ರಣಾಳಿಕೆ ಮಾಡಿ ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಿದ್ದೇವೆ. ಅವರ ನೇತೃತ್ವದಲ್ಲಿ ಒಂದು ವರ್ಷದಲ್ಲಿ ಬಂದಿರುವ ಸಂಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಪ್ರಕೃತಿ ವಿಕೋಪ ಕೊವಿಡ್ ಸಮಸ್ಯೆ ಎಲ್ಲವನ್ನು ಹತೋಟಿಗೆ ತರಲು ಪ್ರಯತ್ನಿಸಿದ್ದಾರೆ' ಎಂದು ಬಿಎಸ್‌ವೈ ಕಾರ್ಯವೈಖರಿ ಬಗ್ಗೆ ಸೋಮಣ್ಣ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...

ಮೊಸರಲ್ಲಿ ಕಲ್ಲು ಹುಡುಕುವುದು ಬೇಡ
'ಅನಗತ್ಯವಾಗಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವುದು ಬೇಡ, ಅವರ ನಾಯಕತ್ವದಲ್ಲಿಯೇ ಮುಂದಿನ ಮೂರು ವರ್ಷ ಅಧಿಕಾರದಲ್ಲಿರುತ್ತಾರೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲದಲ್ಲಿಯೇ ಎದುರಿಸುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷ ಹಾಗೂ ಬೇರೆಯವರೂ ಯಾರೂ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಬೇಡ. ನಾವು ಅವರನ್ನು ನಾಯಕರನ್ನಾಗಿ ಒಪ್ಪಿಕೊಂಡಿದ್ದೇವೆ. ಅವರ ನಾಯಕತ್ವದಲ್ಲಿಯೆ ಮುಂದುವರೆಯುತ್ತೇವೆ. ನಾವು 105 ಜನ ಇದ್ದೆವು ಮುಖ್ಯಮಂತ್ರಿ ಹೊರಗಿನಿಂದ ಬಂದವರಿಗೆ ಅವರ ನಿರೀಕ್ಷೆಗಿಂತ ಹೆಚ್ಚಿಗೆ ಕೊಟ್ಟಿದ್ದೇವೆ. ಅವರು ನಮ್ಮ ಮನೆಯವರಾಗಿದ್ದಾರೆ' ಎಂದು ಸೋಮಣ್ಣ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಕುಮಾರಸ್ವಾಮಿ ಅರಿತು ಮಾತನಾಡುತ್ತಿದ್ದಾರೆ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ವಾಸ್ತವಾಂಶ ಅರಿತುಕೊಂಡು ಸರ್ಕಾರಕ್ಕೆ ಸಹಕಾರ ನೀಡುತ್ತಿದ್ದಾರೆ. ಅವರು ದೇವೇಗೌಡರ ಗರಡಿಯಲ್ಲಿ ಪಳಗಿದ್ದಾರೆ. ಯಾವ ಸಂದರ್ಭದಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂದು ಅವರಿಗೆ ಗೊತ್ತಿದೆ. ಜನರು ಸಂಕಷ್ಟ ಓಡುತ್ತಿರುವ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಒಳ್ಳೆಯದಲ್ಲ ಎಂದು ಕುಮಾರಸ್ವಾಮಿ ಅರಿತು ಮಾತನಾಡುತ್ತಿದ್ದಾರೆ' ಎಂದು ಕುಮಾರಸ್ವಾಮಿ ಬಗ್ಗೆ ಮೃದು ಧೋರಣೆ ತೋರಿದ್ದಾರೆ.

ಕಾಂಗ್ರೆಸ್ ತಿಳಿದು ಕೆಲಸ ಮಾಡಬೇಕಿದೆ
'ಕಾಂಗ್ರೆಸ್ ನವರು ಜನರ ಸಮಸ್ಯೆ ಅರಿತು ಕೆಲಸ ಮಾಡಬೇಕು. ಏನೂ ಆಗದಿದ್ದರೂ ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡುತ್ತಿದ್ದಾರೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಅವರು ರಾಷ್ಟ್ರೀಯ ಪಕ್ಷದ ನಾಯಕರಂತೆ ನಡೆದುಕೊಳ್ಳಬೇಕು' ಎಂದು ಕಿವಿ ಮಾತು ಹೇಳಿದ್ದಾರೆ.

ಮಾತಿಗೆ ತಪ್ಪದ ನಾಯಕ ಯಡಿಯೂರಪ್ಪ
ಇದಕ್ಕೂ ಮುಂಚೆ ನೂತನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮಾತನಾಡಿ 'ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಕೊರೊನಾ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೊನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತೇವೆ. ನಾಲಿಗೆ ಮೇಲೆ ನಿಂತ ನಾಯಕ ಯಡಿಯೂರಪ್ಪ, ಮಾತಿಗೆ ತಪ್ಪದ ನಾಯಕ ಯಡಿಯೂರಪ್ಪ, ನಾವೆಲ್ಲ ಅವರ ಬೆಂಬಲಕ್ಕೆ ಇದೀವಿ'' ಎಂದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications