• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರ್ಮಿಕ ಮುಖಂಡರೊಂದಿಗೆ ಸಿಎಂ ಯಡಿಯೂರಪ್ಪ ಸಂಧಾನ ಸಭೆ

|

ಬೆಂಗಳೂರು, ಡಿಸೆಂಬರ್ 20: ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ಹೆಚ್ಚಾಗುತ್ತಿರುವ ಕಾರಣ, ನಾಳೆ ಸಿಎಂ ಯಡಿಯೂರಪ್ಪ ಅವರು ಧಾರ್ಮಿಕ ಮುಖಂಡರೊಂದಿಗೆ ಸಂಧಾನ ಸಭೆ ನಡೆಸಲಿದ್ದಾರೆ.

ನಾಳೆ (ಶನಿವಾರ) ದಕ್ಷಿಣ ಕನ್ನಡಕ್ಕೆ ಭೇಟಿ ನೀಡುತ್ತಿರುವ ಯಡಿಯೂರಪ್ಪ ಅವರು, ಮುಸ್ಲಿಂ ಧಾರ್ಮಿಕರು ಸೇರಿದಂತೆ ವಿವಿಧ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆದಾಗಲೇ ಹೀಗಾಗೋದು ಯಾಕೇ?

ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯುವಂತೆ, ಶಾಂತಿ ಕಾಪಾಡುವಂತೆ ಮನವಿ ಮಾಡುವಂತೆ ಯಡಿಯೂರಪ್ಪ ಅವರು ಧಾರ್ಮಿಕ ಮುಖಂಡರಲ್ಲಿ ಮನವಿ ಮಾಡಲಿದ್ದಾರೆ.

ಮಂಗಳೂರಿನಲ್ಲಿ ನಿನ್ನೆ ನಡೆದ ಗೋಲಿಬಾರ್ ಬಗ್ಗೆ ವಿಸ್ತೃತ ಮಾಹಿತಿ ಪಡೆಯಲಿರುವ ಯಡಿಯೂರಪ್ಪ ಅವರು, ಮೃತರ ಕುಟುಂಬಕ್ಕೆ ಪರಿಹಾರವನ್ನೂ ನಾಳೆ ಘೋಷಿಸಲಿದ್ದಾರೆ.

ಯಡಿಯೂರಪ್ಪ ಅವರೊಂದಿಗೆ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಸಹ ನಾಳೆ ಮಂಗಳೂರಿಗೆ ತೆರಳಲಿದ್ದಾರೆ.

English summary
CM Yediyurappa meeting religon leaders tomorrow to slow down CAA protest happening in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X