ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆ.27ರಿಂದ ಬೆಂಗಳೂರಲ್ಲಿ ಮೆಟ್ರೋ ಪ್ರಾಯೋಗಿಕ ಸಂಚಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 25 : ಯಲಚೇನಹಳ್ಳಿ-ಅಂಜನಾಪುರ ನಡುವಿನ ಮೆಟ್ರೋ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರ ಆಗಸ್ಟ್ 27ರಿಂದ ಆರಂಭವಾಗುವ ನಿರೀಕ್ಷೆ ಇದೆ. ನವೆಂಬರ್‌ 1ರಂದು ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭಿಸುವ ಸಾಧ್ಯತೆ ಇದೆ.

Recommended Video

Pakistanಕ್ಕೆ ಎಲ್ಲಾ ವಿಚಾರದಲ್ಲೂ ಸಾಥ್ ನೀಡಲು ಮುಂದಾದ China | Oneindia Kannada

ಬೆಂಗಳೂರು ನಗರದ ನಮ್ಮ ಮೆಟ್ರೋ ಯೋಜನೆಯ 2ನೇ ಹಂತದ ಮೊದಲ ವಿಸ್ತರಿತ ಮಾರ್ಗ ಇದಾಗಿದೆ. ರೀಚ್ 4ಬಿ ಮಾರ್ಗ 6.29 ಕಿ. ಮೀ. ಇದ್ದು, ನಿಲ್ದಾಣಗಳ ನಿರ್ಮಾಣ ಸೇರಿದಂತೆ ಶೇ 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ.

ಬೆಂಗಳೂರಿಗರಿಗೆ ಶುಭ ಸುದ್ದಿ ಕೊಟ್ಟ ಬಿಎಂಆರ್‌ಸಿಎಲ್ಬೆಂಗಳೂರಿಗರಿಗೆ ಶುಭ ಸುದ್ದಿ ಕೊಟ್ಟ ಬಿಎಂಆರ್‌ಸಿಎಲ್

ಈ ಹಿಂದೆ ಜುಲೈ 25ಕ್ಕೆ ಪರೀಕ್ಷಾರ್ಥ ಸಂಚಾರ ಆರಂಭ ಮಾಡಿ, ಆಗಸ್ಟ್ 15ಕ್ಕೆ ಮಾರ್ಗವನ್ನು ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳಿಸುವ ಗುರಿ ಹೊಂದಲಾಗಿತ್ತು. ಆದರೆ, ಕೋವಿಡ್ ಲಾಕ್ ಡೌನ್ ಪರಿಣಾಮದಿಂದಾಗಿ ನವೆಂಬರ್ 1ಕ್ಕೆ ಮಾರ್ಗವನ್ನು ಜನರ ಸಂಚಾರಕ್ಕೆ ಮುಕ್ತಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ.

ಸೆಪ್ಟೆಂಬರ್ 1ರಿಂದ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ? ಸೆಪ್ಟೆಂಬರ್ 1ರಿಂದ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ?

Yelachenahalli Anjanapura Metro Train Run From August 27

ಈ ಮಾರ್ಗದಲ್ಲಿ ಒಟ್ಟು 5 ನಿಲ್ದಾಣಗಳು ಬರಲಿವೆ. ತುಮಕೂರು ರಸ್ತೆಯ ನಾಗಸಂದ್ರದಿಂದ ಹೊರಡುವ ರೈಲು ಪ್ರಸ್ತುತ ಯಲಚೇನಹಳ್ಳಿ ತನಕ ಸಂಚಾರ ನಡೆಸುತ್ತಿದೆ. ವಿಸ್ತರಿತ ಮಾರ್ಗದಲ್ಲಿ ರೈಲು ಕನಕಪುರ ರಸ್ತೆಯ ಅಂಜನಾಪುರದ ತನಕ ಸಂಚರಿಸಲಿದೆ.

ದೆಹಲಿಯಲ್ಲಿ ಮೆಟ್ರೋ ಸೇವೆ ಪುನಾರಾರಂಭಕ್ಕೆ ಅನುಮತಿ ಕೊಡಿ: ಸಿಎಂ ಅರವಿಂದ್ ಕೇಜ್ರಿವಾಲ್ದೆಹಲಿಯಲ್ಲಿ ಮೆಟ್ರೋ ಸೇವೆ ಪುನಾರಾರಂಭಕ್ಕೆ ಅನುಮತಿ ಕೊಡಿ: ಸಿಎಂ ಅರವಿಂದ್ ಕೇಜ್ರಿವಾಲ್

ನಿಲ್ದಾಣಗಳು : ಯಲಚೇನಹಳ್ಳಿಯಿಂದ ಹೊರಡುವ ರೈಲು ಕೋಣನಕುಂಟೆ ಕ್ರಾಸ್, ದೊಡ್ಡಕಲ್ಲಸಂದ್ರ, ವಜ್ರಹಳ್ಳಿ, ತಲಘಟ್ಟಪುರ ಮೂಲಕ ಅಂಜನಾಪುರ ತಲುಪಲಿದೆ. 2016ರಲ್ಲಿ ಈ ಮಾರ್ಗದ ಕಾಮಗಾರಿಯನ್ನು ಆರಂಭಿಸಲಾಗಿದ್ದು, ಈಗ ಪೂರ್ಣಗೊಂಡಿದೆ.

English summary
Trail run in Yelachenahalli-Anjanapura namma metro route from August 27, 2020. 6.29 km route has 5 stations and route may open for public from November 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X