ಯಲಹಂಕದಲ್ಲಿ ಬೃಹತ್ ರೈಲು ನಿಲ್ದಾಣ ನಿರ್ಮಾಣ: ಖರ್ಗೆ

Yelahanka to be developed as a full-fledged railway terminus Mallikarjun Kharge
ಬೆಂಗಳೂರು, ಸೆ. 16: ಬೆಂಗಳೂರಿನ ಉತ್ತರ ಭಾಗದಲ್ಲಿರುವ ಯಲಹಂಕದ ಸುತ್ತಮುತ್ತಲ ಪ್ರದೇಶಕ್ಕೆ ಮತ್ತಷ್ಟು ಮಹತ್ವ ಬಂದಿದೆ. ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲೆಯೆತ್ತಿದ್ದೇ ಇಲ್ಲಿನ ರಿಯಲ್ ಎಸ್ಟೇಟ್ ಗಗನಕ್ಕೆ ಚಿಮ್ಮಿತ್ತು. ಆನಂತರ ಅನಾಕಾನೇಕ ಮಹತ್ವದ ಯೋಜನೆಗಳು ಇಲ್ಲಿ ತಲೆಯೆತ್ತಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಗಗನದಲ್ಲೇ ಬಿಟ್ಟುಬಂದಿದೆ. ಇದೀಗ ಯಲಹಂಕಕ್ಕೆ ಮತ್ತೊಂದು ಕೊಡುಗೆ ಪ್ರಾಪ್ತಿಯಾಗಿದೆ.

ಯಲಹಂಕ ನ್ಯೂಟೌನ್ ಸಮೀಪ ದೊಡ್ಡ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಮಾಪಣ್ಣ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಂಗಳೂರು ಸಿಟಿ ರೈಲು ನಿಲ್ದಾಣ ಮತ್ತು ಯಶವಂತಪುರ ನಿಲ್ದಾಣದಲ್ಲಿ ಜಾಗದ ಸಮಸ್ಯೆ ಇರುವುದರಿಂದ ಹೊಸ ರೈಲುಗಳನ್ನು ನಿಲ್ಲಿಸಲು ಸಾಧ್ಯವಾಗುತ್ತಿಲ್ಲ. ಪ್ಲಾಟ್‌ ಫಾರಂಗಳ ಕೊರತೆ ಕಾಡುತ್ತಿದೆ. ಆದ್ದರಿಂದ ಯಲಹಂಕದಲ್ಲಿ ಇದಕ್ಕೆ ಮೂರನೆಯ ದೊಡ್ಡ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ ಎಂದು ಅವರು ಹೇಳಿದರು.

ಈಗಾಗಲೇ ಯಶವಂತಪುರ ಮತ್ತು ಸಿಟಿ ರೈಲು ನಿಲ್ದಾಣ ಪ್ರಯಾಣಿಕರಿಂದ ತುಂಬಿತುಳುಕುತ್ತಿದೆ. ಇದನ್ನು ತಪ್ಪಿಸಬೇಕಾದರೆ ಯಲಹಂಕದಲ್ಲಿ ಸೌಲಭ್ಯ ಕಲ್ಪಿಸುವುದು ಅನಿವಾರ್ಯವಾಗಿದೆ. ಹಾಗಾಗಿ ಅದ್ಯದಲ್ಲೇ ಯಲಹಂಕದಲ್ಲಿ ದೊಡ್ಡ ರೈಲು ನಿಲ್ದಾಣ ಸ್ಥಾಪನೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+