• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್ ನೇಣಿಗೆ ಶರಣು

|

ಬೆಂಗಳೂರು, ಅಕ್ಟೋಬರ್ 16 : ಬೆಂಗಳೂರಿನ 'ಯಲಹಂಕ ವಾಯ್ಸ್' ಕನ್ನಡ ಮಾಸ ಪತ್ರಿಕೆ ಸಂಪಾದಕ ಅನಿಲ್ ರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಚಾರಣಾಧೀನ ಕೈದಿಯಾಗಿ ಅನಿಲ್ ಜೈಲಿನಲ್ಲಿದ್ದರು. ಕಾಂಗ್ರೆಸ್ ಪಕ್ಷದ ಜೊತೆ ಅನಿಲ್ ರಾಜ್ ಗುರುತಿಸಿಕೊಂಡಿದ್ದರು.

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅನಿಲ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳವಾರ ಕುಟುಂಬ ಸದಸ್ಯರು ಅವರನ್ನು ಭೇಟಿಯಾಗಿದ್ದರು. ರಾತ್ರಿ ವೇಳೆಗೆ ಅನಿಲ್ ಸಾವನ್ನಪ್ಪಿದ್ದಾರೆ ಎಂದು ಕುಟುಂಬದರಿಗೆ ಮಾಹಿತಿ ನೀಡಲಾಗಿದೆ.

ಶ್ರೀರಂಗಪಟ್ಟಣ ಡಿವೈಎಸ್ಪಿ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ತಿರುವು

ಮದುವೆ ಆಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಅನಿಲ್ ರಾಜ್ ಮೇಲೆ ಇತ್ತು. ಯಲಹಂಕ ಉಪ ನಗರ ಪೊಲೀಸರು ಅವರನ್ನು ಬಂಧಿಸಿದ್ದರು. ವಿಚಾರಣಾಧೀನ ಕೈದಿಯಾಗಿ ಅನಿಲ್ ಜೈಲಿನಲ್ಲಿದ್ದರು.

ರಮೇಶ್ ನಿವಾಸದಲ್ಲಿಯೂ ಶೋಧಕ್ಕೆ ಐಟಿ ವಾರೆಂಟ್ ಪಡೆದಿತ್ತು

ಜೈಲಿನ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅನಿಲ್‌ರನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಮಾರ್ಗ ಮಧ್ಯಯೇ ಅವರು ಮೃತಪಟ್ಟಿದ್ದರು.

ರಮೇಶ್ ಅಸಹಜ ಸಾವು; ಕೊನೆ ಎರಡು ಕರೆ, ಡೈರಿಯಲ್ಲಿ ಏನಿದೆ?

'ಯಲಹಂಕ ವಾಯ್ಸ್' ಪತ್ರಿಕೆ

'ಯಲಹಂಕ ವಾಯ್ಸ್' ಪತ್ರಿಕೆ

'ಯಲಹಂಕ ವಾಯ್ಸ್' ಎಂಬ ಕನ್ನಡ ಮಾಸ ಪತ್ರಿಕೆಗೆ ಅನಿಲ್ ರಾಜ್ ಸಂಪಾದಕರಾಗಿದ್ದರು. ಭ್ರಷ್ಟಾಚಾರದ ಬಗ್ಗೆ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಪ್ರಕಟಿಸುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಸಕ್ರಿಯರಾಗಿದ್ದ ಅವರು ಅತ್ಯಾಚಾರ, ವಂಚನೆ ಆರೋಪದ ಮೇಲೆ ಜೈಲು ಸೇರಿದ್ದರು.

ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದರು

ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದರು

ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದ ಅನಿಲ್ ರಾಜ್ ಯಲಹಂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಭೂ ಒತ್ತುವರಿ ಕುರಿತು ಹಲವು ದಾಖಲೆಗಳನ್ನು ಸಂಗ್ರಹಿಸಿದ್ದ ಅನಿಲ್, ಸಾಮಾಜಿಕ ಜಾಲತಾಣದಲ್ಲಿ ಅವುಗಳನ್ನು ಹಾಕುತ್ತಿದ್ದರು.

ಮಾನನಷ್ಟ ಮೊಕದ್ದಮೆ ಹಾಕಿದ್ದರು

ಮಾನನಷ್ಟ ಮೊಕದ್ದಮೆ ಹಾಕಿದ್ದರು

ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ವಿರುದ್ಧ ಹಲವು ವರದಿಗಳನ್ನು ಅನಿಲ್ ರಾಜ್ ಪ್ರಕಟಿಸಿದ್ದರು. ಅನಿಲ್ ರಾಜ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದ ವಿಶ್ವನಾಥ್, ಹಕ್ಕುಚ್ಯುತಿ ಮಂಡಿಸಲು ಸ್ಪೀಕರ್‌ಗೆ ದೂರು ನೀಡಿದ್ದರು. ಪತ್ರಿಕೆ ಪ್ರಕಟಣೆಗೆ ತಡೆಯನ್ನು ತಂದಿದ್ದರು. ಆದರೆ, ಕಾನೂನು ಹೋರಾಟದಲ್ಲಿ ಅನಿಲ್ ಗೆದ್ದಿದ್ದರು.

ದೊಡ್ಡ ಮಟ್ಟದ ಚರ್ಚೆ ಆಗಿತ್ತು

ದೊಡ್ಡ ಮಟ್ಟದ ಚರ್ಚೆ ಆಗಿತ್ತು

ವಿಧಾನಸಭೆಯ ಹಕ್ಕು ಬಾಧ್ಯತೆ ಸಮಿತಿ ಅನಿಲ್‌ ರಾಜ್‌ಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಬೇಕು ಎಂದು ಶಿಫಾರಸು ಮಾಡಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು. ನ್ಯಾಯಾಲಯ ಅನಿಲ್ ರಾಜ್ ಬಂಧಿಸದಂತೆ ತಡೆ ನೀಡಿತ್ತು. ಆಗ ಯಲಹಂಕ ವಾಯ್ಸ್ ಪತ್ರಿಕೆ ಬಗ್ಗೆ ಭಾರಿ ಚರ್ಚೆ ನಡೆದಿತ್ತು.

ಕಾರಣ ನಿಗೂಢ

ಕಾರಣ ನಿಗೂಢ

ಕಾರಾಗೃಹ ಇಲಾಖೆ ಹಿರಿಯ ಅಧಿಕಾರಿಗಳು ಜೈಲಿಗೆ ತೆರಳಿ ಪರಿಶೀಲನೆ ನಡೆಸಿದರು. ಮಂಗಳವಾರ ಕುಟುಂಬ ಸದಸ್ಯರು ಅನಿಲ್ ರಾಜ್ ಭೇಟಿಯಾಗಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡಿದ್ದು ಏಕೆ? ಎಂಬುದ ಇನ್ನೂ ನಿಗೂಢವಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Yelahanka Voice Kannada news paper editor Anil Raj committed suicide at Parappana Agrahara jail. He is accused in the cheating case and in jail from past few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more