Bengaluru Rain: ವಾರಾಂತ್ಯದ ಮೋಜು ಮಸ್ತಿ ಹೆಚ್ಚಿಸಿದ ವರುಣ: ಮುಂದಿನ 5 ದಿನ ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ಮೇ 10: ಮಳೆ... ಮಳೆ.... ಮಳೆ... ಯಾರ ಬಾಯಲ್ಲೆ ಕೇಳಿದರೂ ಮಳೆಯದ್ದೇ ಮಾತು. ಏಪ್ರಿಲ್ ತಿಂಗಳಲ್ಲಿ ಮಳೆಯಾಗದೆ ಬಿರು ಬಿಸಿಲಿಗೆ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ಮಳೆರಾಯ ತಂಪನ್ನೆರೆಯುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯ ರಾಜಧಾನಿಯಲ್ಲಿ ಮಳೆಯಾಗುತ್ತಿದ್ದು ಜನ ಸಂತಸಗೊಂಡಿದ್ದಾರೆ. ಈ ನಡುವೆ ಮುಂದಿನ 5 ದಿನ ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ನೀಡಿದೆ.

ಹೌದು.. ಇಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ. ಈ ವಾರಾಂತ್ಯದಲ್ಲಿ ಬಂದ ಅಕ್ಷಯ ತೃತೀಯ ಹಬ್ಬವನ್ನು ಸತತ ಮಳೆ ಮತ್ತಷ್ಟು ಸುಂದರಗೊಳಿಸಿದೆ. ತಂಪಾದ ವಾತಾವರಣವನ್ನು ಆನಂದಿಸುತ್ತ ಜನ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಬ್ಬದ ಪ್ರಯುಕ್ತ ಖರೀದಿ ಭರಾಟೆ ಕೂಡ ಜೋರಾಗಿದೆ.

Yellow alert Heavy rainfall forecast in Bengaluru for the next 5 days

ಆದರೆ ಕೆಲವೆಡೆ ಸತತ ಮೂರ್ನಾಲ್ಕು ದಿನ ಸುರಿದ ಮಳೆಗೆ ಜನ ಬೇಸತ್ತಿದ್ದಾರೆ. ಮಳೆ ಬೇಕು ಬೇಕು ಎನ್ನುತ್ತಿದ್ದ ಜನ ಈಗಲೇ ಸಾಕು ಸಾಕು ಎಂಬಂತಾಗಿದೆ. ತಗ್ಗುಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಜನಸಾಮಾನ್ಯರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಪ್ರತಿಷ್ಠಿತ ಪ್ರದೇಶಗಳ ರಸ್ತೆಗಳು ಜಾಲಾವೃತಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಕಳೆದ ದಿನ ಬೆಂಗಳೂರಿನಲ್ಲಿ ಸುರಿದ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ. ಬಲವಾದ ಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಬೆಂಗಳೂರಿನಲ್ಲಿ ಗುರುವಾರ ಗುಡುಗು ಸಹಿತ ಮಳೆ ನಡುರಾತ್ರಿಯವರೆಗೆ ಸುರಿದಿದೆ. ಇದರಿಂದ ಕೆಲಸ ಕಾರ್ಯ ಮುಗಿಸಿ ಮನೆಗೆ ತೆರಳುವ ವಾಹನ ಸವಾರರಿಗೆ ಮಳೆ ಸಾಕಷ್ಟು ತೊಂದರೆ ಉಂಟು ಮಾಡಿದೆ. ಹಲವೆಡೆ ಅಂಡರ್‌ಪಾಸ್‌ಗಳು ರಸ್ತೆಗಳು ಜಲಾವೃತಗೊಂಡು ಸಂಚಾರ ವ್ಯತ್ಯಯವಾಗಿತ್ತು.

Yellow alert Heavy rainfall forecast in Bengaluru for the next 5 days

ಇದರಿಂದಾಗಿ ಬಿಬಿಎಂಪಿಗೆ ಸಮಸ್ಯೆಗಳ ಸರಮಾಲೆಯೇ ಹರಿದು ಬರುತ್ತಿದೆ. ಪ್ರತಿ ವಾರ್ಡ್ ಕಚೇರಿಯಲ್ಲಿ ಇರುವ ಮರ ಕಡಿಯುವ ಯಂತ್ರವನ್ನು ಬಳಸಿ ಮರವನ್ನು ತೆರವುಗೊಳಿಸಲು ಸಂಚಾರ ಪೊಲೀಸರು ಸ್ಥಳೀಯ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಮುಂದಾಗಿದ್ದಾರೆ.

ಶಿವಾಜಿ ನಗರ, ಜಯನಗರ, ಚಂದ್ರಲೇಔಟ್, ಬನಶಂಕರಿ, ಸದಾಶಿವನಗರ, ಆರ್‌.ಟಿ.ನಗರ, ಹೆಬ್ಬಾಳ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ವಸಂತನಗರ, ಸಹಕಾರನಗರ, ಭಾಷ್ಯಂ ಸರ್ಕಲ್ ಸೇರಿದಂತೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ಗುರುವಾರ ಸಂಜೆ ಮತ್ತು ರಾತ್ರಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ.

ಮುಂದಿನ 48 ಗಂಟೆಗಳ ಕಾಲ

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ ವಾರದವರೆಗೂ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ.

ಬೆಂಗಳೂರಿನಲ್ಲಿ ಇಂದೂ ಕೂಡ ಮೋಡ ಕವಿದ ವಾತಾವರಣವಿದ್ದು 40-50 ಕಿಮಿ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರಿಗೆ ಮಳೆಯ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ಮುಂದಿನ 5 ದಿನಗಳ ನಗರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+