ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್: ರಾಜ್ಯದಲ್ಲಿ 4 ದಿನ ಮಳೆಯೋ ಮಳೆ ಎಂದ ಹವಾಮಾನ ಇಲಾಖೆ

|
Google Oneindia Kannada News

ಬೆಂಗಳೂರು, ಜೂನ್ 3: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಭೀತಿ, 5 ದಿನ ಅಲರ್ಟ್ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಭೀತಿ, 5 ದಿನ ಅಲರ್ಟ್

ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಳದಿ (ಯೆಲ್ಲೋ) ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಲಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮತ್ತು ಶನಿವಾರ ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Yellow Alert in Bengaluru; Heavy Rain in Another 4 Day at Karnataka, Says IMD

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ಕುರಿತು ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರದ ಪ್ರಕಟಣೆಯಲ್ಲಿ ತಿಳಿಸಿದೆ.

ಹಳದಿ ಎಚ್ಚರಿಕೆಯು ಕೇವಲ ವೀಕ್ಷಣೆಯ ಸಂಕೇತವಾಗಿದೆ. ಈ ಎಚ್ಚರಿಕೆಯ ಸಮಯದಲ್ಲಿ ಹವಾಮಾನ ಪರಿಸ್ಥಿತಿಯು 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗುತ್ತದೆ ಎಂದು ತಿಳಿಸಿದೆ. ಮೇ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ನಗರದ ರಸ್ತೆಗಳೆಲ್ಲ ಜಲಾವೃತಗೊಂಡಿತ್ತು.

English summary
Yellow Alert in Bengaluru; Heavy Rain in Another 4 Day at Karnataka, Says Indian Meteorological Department. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X