ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಭಾರೀ ಮಳೆ ಎಚ್ಚರಿಕೆ; ರಾಜ್ಯದ ಕೆಲವು ಜಿಲ್ಲೆಗಳಲ್ಲೂ ಸೋಮವಾರ ಮಳೆ

|
Google Oneindia Kannada News

ಬೆಂಗಳೂರು, ಜೂನ್ 6: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಸೋಮವಾರವೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸುವ ಕುರಿತು ಎಚ್ಚರಿಕೆ ನೀಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಅಷ್ಟೇ ಅಲ್ಲದೇ ರಾಮನಗರ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ. ಶಿವಮೊಗ್ಗ ನಗರದಲ್ಲಿ ಸೋಮವಾರ ಮುಂಜಾನೆ ಮಳೆ ಆರಂಭವಾಗಿದೆ.

Bengaluru Rains: ಬೆಂಗಳೂರಲ್ಲಿ ರಾತ್ರಿ ಮಳೆಗೆ ತತ್ತರಿಸಿದ ನಾಗರಿಕರುBengaluru Rains: ಬೆಂಗಳೂರಲ್ಲಿ ರಾತ್ರಿ ಮಳೆಗೆ ತತ್ತರಿಸಿದ ನಾಗರಿಕರು

ಭಾನುವಾರ ರಾತ್ರಿಯಿಂದಲೇ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ದಕ್ಷಿಣ ರಾಜ್ಯ, ಕರಾವಳಿಯಲ್ಲಿ ಮಳೆ

ಸೋಮವಾರ ದಕ್ಷಿಣ ರಾಜ್ಯ, ಕರಾವಳಿಯಲ್ಲಿ ಮಳೆ

"ದಕ್ಷಿಣ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ" ಎಂದು ಹವಾಮಾನ ಇಲಾಖೆಯ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ದಕ್ಷಿಣ ಒಳನಾಡಿನ ಕರ್ನಾಟಕ ಪ್ರದೇಶದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. "ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ" ಎಂದು ಪ್ರಕಟಣೆ ತಿಳಿಸಿದೆ.

ಗರಿಷ್ಠ ತಂಪಾದ ತಾಪಮಾನ ದಾಖಲು

ಗರಿಷ್ಠ ತಂಪಾದ ತಾಪಮಾನ ದಾಖಲು

ಬೆಂಗಳೂರಿನಲ್ಲಿ ಮಳೆಯಿಂದಾಗಿ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಿದ್ದು ಆಗಿದೆ. ಮೇ ತಿಂಗಳಿನಲ್ಲಿ ಅತ್ಯಂತ ತಂಪಾದ ತಾಪಮಾನವು ಸಿಲಿಕಾನ್ ಸಿಟಿಯಲ್ಲಿ ವರದಿಯಾಗಿದೆ. ಐಟಿ ನಗರಿಯಲ್ಲಿನ ತಂಪು ವಾತಾವರಣಕ್ಕೆ ಜನರು ಥರಥರ ನಡುಗಿ ಹೋಗಿದ್ದಾರೆ. ಒಂದು ದಶಕದಲ್ಲಿ ಅತ್ಯಂತ ಚಳಿಯ ದಿನವನ್ನೂ ವರದಿ ಮಾಡಿರುವುದು ಆಗಿದೆ. ಮೇ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ ಅವಾಂತರ ಸಹ ಸೃಷ್ಟಿ ಮಾಡಿತ್ತು.

ಅಕಾಲಿಕ ಮಳೆಯಿಂದ ಬೆಳೆ ನಷ್ಟ

ಅಕಾಲಿಕ ಮಳೆಯಿಂದ ಬೆಳೆ ನಷ್ಟ

ಕರ್ನಾಟಕದಲ್ಲಿ ಈಗಾಗಲೇ ಮೇ ತಿಂಗಳಲ್ಲಿ ಸಾಕಷ್ಟು ಪ್ರಮಾಣದ ಅಕಾಲಿಕ ಮಳೆಯಾಗಿದೆ. ವರುಣನ ಅಬ್ಬರದಿಂದಾಗಿ 4,500ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಅಕಾಲಿಕ ಮಳೆಯಿಂದಾಗಿ 7,010 ಹೆಕ್ಟೇರ್ ಕೃಷಿ ಭೂಮಿ ಮತ್ತು 5,736 ಹೆಕ್ಟೇರ್ ತೋಟಗಾರಿಕೆ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ. ಸೋಮವಾರ ಸುರಿಯುವ ಮಳೆಯಿಂದ ಮತ್ತಷ್ಟು ಬೆಳೆಹಾನಿ ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರ

ಸಿಲಿಕಾನ್ ಸಿಟಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರ

ಭಾರತದ ಐಟಿ ರಾಜಧಾನಿಯಲ್ಲಿ ಸರ್ಕಾರದ ಯೋಜನೆಗಳು ಮತ್ತು ಮೂಲಸೌಕರ್ಯಗಳು ಎಷ್ಟರ ಮಟ್ಟಿಗೆ ಅಸಮರ್ಪಕವಾಗಿವೆ ಎನ್ನುವುದನ್ನು ಅಕಾಲಿಕ ಮಳೆಯು ಮತ್ತೊಮ್ಮೆ ಸಾಬೀತುಪಡಿಸಿತು. ಮೇ ತಿಂಗಳಿನಲ್ಲಿ ಸುರಿದ ಮಳೆಯು ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಸಿದ ಅವಾಂತರಗಳು ಒಂದೆರೆಡಲ್ಲ. ನಗರದ ಹಲವಾರು ಅಪಾರ್ಟ್‌ಮೆಂಟ್‌ಗಳು ಮತ್ತು ಮನೆಗಳು ಜಲಾವೃತಗೊಂಡವು, ವ್ಯಾಪಾರಗಳು ಮತ್ತು ಜೀವನೋಪಾಯ ಅಂಗಡಿಗಳು ಮತ್ತು ಮಳಿಗೆಗಳಿಗೆ ನೀರು ನುಗ್ಗಿತು. ರಸ್ತೆಗಳು ಜಲಾವೃತಗೊಂಡಿದ್ದರೆ, ಕೆಲವು ಕಡೆಗಳಲ್ಲಿ ವಾಹನಗಳೂ ಮುಳುಗಿ ಹೋಗಿದ್ದವು. ಸಂಜೆ ಹೊತ್ತಲ್ಲಿ ಸುರಿಯುವ ಮಳೆಯಿಂದ ನಗರದಲ್ಲಿ ವಾಹನ ಸವಾರರು ಪ್ರತಿನಿತ್ಯ ಪರಿತಪಿಸುವಂತಾ ವಾತಾವರಣವನ್ನು ಮಳೆರಾಯ ಸೃಷ್ಟಿಸಿದ್ದನು.

Recommended Video

ಬಿಜೆಪಿ-ಕಾಂಗ್ರೆಸ್ ಚಡ್ಡಿ ಪಾಲಿಟಿಕ್ಸ್ ಬಗ್ಗೆ HDK ಫುಲ್ ಗರಂ | #Politics | OneIndia Kannada

English summary
Yellow Alert in Bengaluru; Heavy Rain in Several parts of Karnataka on Monday, Says IMD, Says Indian Meteorological Department. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X