ಸಮಾನ ಮನಸ್ಕ ಶಾಸಕರ ಸಭೆ ಬರೆದ ಎಸ್‌.ಟಿ.ಸೋಮಶೇಖರ್

ಬೆಂಗಳೂರು, ಏಪ್ರಿಲ್ 28 : ಒಂದು ಕಡೆ ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತನಾಡುತ್ತಿದ್ದಾರೆ. ಮತ್ತೊಂದು ಕಡೆ ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸಮಾನ ಮನಸ್ಕ ಶಾಸಕರ ಸಭೆ ಕರೆದಿದ್ದಾರೆ.

ಹೌದು, ಶಾಸಕ ಎಸ್.ಟಿ.ಸೋಮಶೇಖರ್ ಅವರು ಏಪ್ರಿಲ್ 30ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಮಾನ ಮನಸ್ಕ ಶಾಸಕರ ಸಭೆ ಕರೆದಿದ್ದಾರೆ. ಈ ಕುರಿತ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಆದ್ದರಿದ ಸಮಾನ ಮನಸ್ಕ ಶಾಸಕರ ಸಭೆ ಕರೆಯಲಾಗಿದೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಹೇಳಲಾಗಿದೆ. ರಾಜ್ಯ ರಾಜಕಾರಣದಲ್ಲಿ ಈ ಸಭೆ ಕುತೂಹಲಕ್ಕೆ ಕಾರಣವಾಗಿದೆ.

Yeshwanthpur Congress MLA ST Somashekar calls MLAs meeting

ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ಕೆಲವು ತಿಂಗಳ ಹಿಂದೆ ಹೇಳಿಕೆ ನೀಡಿದ್ದರು.

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ, ಕೆ.ಆರ್.ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜು ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಯ ಶಾಸಕರು ಎಸ್.ಟಿ.ಸೋಮಶೇಖರ್ ಅವರು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಸಮಾನ ಮನಸ್ಕ ಶಾಸಕರ ಸಭೆಯಲ್ಲಿ ಏನು ಚರ್ಚೆ ನಡೆಯಲಿದೆ?. ಇದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ಯಾವ ಪ್ರಭಾವ ಬೀರಲಿದೆ? ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+