ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜಾಮೀನು

|
Google Oneindia Kannada News

ಬೆಂಗಳೂರು, ಆಗಸ್ಟ್ 19: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರುವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು

ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಇದೀಗ ಸಾಕ್ಷ್ಯನಾಶ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವೂ ಜಾಮೀನು ಮಂಜೂರು ಮಾಡಿದೆ. ಇದರಿಂದ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದಿಂದಲೂ ಜಾಮೀನು ದೊರೆತಿರುವುದು ನಿರಾಳರಾಗಿದ್ದಾರೆ.

Yogesh Gowda Murder Case: Former Minister Vinay Kulkarni Got Bail In The Case 195A

ಕಾಂಗ್ರೆಸ್ ಮಾಜಿ ಶಾಸಕ ವಿನಯ್ ಕುಲಕರ್ಣಿ ಈಗಾಗಲೇ ಯೋಗೇಶ್ ಗೌಡ ಹತ್ಯೆ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ನ್ಯಾ. ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ ಸಿಬಿಐ ಆಕ್ಷೇಪಣೆಯ ನಡುವೆಯೂ ವಿನಯ್ ಕುಲಕರ್ಣಿಗೆ ಜಾಮೀನು ನೀಡಿ ಆದೇಶ ಪ್ರಕಟಿಸಿತ್ತು.

ಸುಪ್ರೀಂ ಕೋರ್ಟ್‌ ಆದೇಶದಲ್ಲಿ ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ. ಸಿಬಿಐ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ವಿನಯ್ ಕುಲಕರ್ಣಿಗೆ ಷರತ್ತು ವಿಧಿಸಿತ್ತು. ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಸಿಬಿಐ ಪರ ವಕೀಲ ಎಎಸ್‌ಜಿ. ಎಸ್.ವಿ. ರಾಜು ವಾದ ಮಂಡನೆ ಮಾಡಿದ್ದರು.

ಸಿಬಿಐ ವಾದವೇನು?
ಎ1 ಆರೋಪಿಗಳಿಂದ ಎ15 ರವರೆಗಿನ ಆರೋಪಿಗಳಿಗೆ ಆರು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ಪ್ರಕರಣದ ತನಿಖಾಧಿಕಾರಿಗೂ ಎರಡು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ವಿನಯ್ ಕುಲಕರ್ಣಿ ಮನವಿ ಮೇರೆಗೆ ಹಾರ್ನ್ ಬಿಲ್ ರೆಸಾರ್ಟ್‌ನಲ್ಲಿ ಸಾಕ್ಷಿಗಳಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎಂದು ಸಿಬಿಐ ಪರ ವಕೀಲರು ವಾದಿಸಿದರು.

Yogesh Gowda Murder Case: Former Minister Vinay Kulkarni Got Bail In The Case 195A

ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿಗೆ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಜೊತೆಗೆ ವೈಷಮ್ಯ ಇತ್ತು. ಭೂ ವಿವಾದದಿಂದ ಕೊಲೆಯಾಗಿದೆ ಎಂದು ಬಿಂಬಿಸುವ ಯತ್ನ ಮಾಡಿದ್ದರು. ಸಿಬಿಐ ತನಿಖೆ ನಡೆಸಿದ ಬಳಿಕ ದೊಡ್ಡ ಷಡ್ಯಂತ್ರ ಬೆಳಕಿಗೆ ಬಂದಿದೆ. ವಿನಯ್ ಕುಲಕರ್ಣಿ ಕೊನೆಯಲ್ಲಿ ಪ್ರಮುಖ ಪಾತ್ರವಾಗಿದ್ದು, ಸಾಕ್ಷ್ಯವನ್ನು ತಿರುಚಲಾಗಿದೆ. ಪೊಲೀಸ್ ತನಿಖೆಯಲ್ಲಿ ಕೊಲೆ, ಸಣ್ಣ ಷಡ್ಯಂತ್ರ ಮಾತ್ರ ಪ್ರಸ್ತಾಪವಾಗಿದೆ.

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿಯನ್ನು ಸಿಬಿಐ 2020ರ ನವೆಂಬರ್ 05 ರಂದು ಬಂಧಿಸಿತ್ತು.

ಪ್ರಕರಣವೇನು?
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ್ ಗೌಡರನ್ನು ಧಾರವಾಡದ ಜಿಮ್‌ನಲ್ಲಿ ಜೂನ್ 15, 2016ರಂದು ಕೊಲೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಯೋಗೇಶ್ ಗೌಡ ಸಹೋದರ ಹಾಗೂ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿ, ಸಿಬಿಐ ತನಿಖೆಯಾಗಬೇಕು ಎಂದು ಅಂದಿನ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು.

Recommended Video

Mohammed Siraj ಗೆ ಅಂದು troll ಮಾಡಿದವರು ಇಂದು ಹಾರ ಹಾಕಿ ಸನ್ಮಾನಿಸುತ್ತಿದ್ದಾರೆ | Oneindia Kannada

ಆಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸದೆ ಎಸ್‌ಐಟಿಗೆ ವಹಿಸಿ ಕೈತೊಳೆದುಕೊಂಡಿತ್ತು. ನಂತರ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ವಿನಯ್ ಕುಲಕರ್ಣಿ ಸೋತರು.

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ಪ್ರಕರಣವನ್ನು ಸಿಬಿಐಗೆ ವಹಿಸಲಿಲ್ಲ. ನಂತರ ಸಮ್ಮಿಶ್ರ ಸರ್ಕಾರ ಪತನಗೊಂಡು 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು.

ಬಿಜೆಪಿ ಸರ್ಕಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಸಿಬಿಐಗೆ ವಹಿಸಿದ್ದರು. ಹತ್ಯೆ ಪ್ರಕರಣದ ತನಿಖೆ ಕೈಗೊಂಡ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಬಂಧಿಸಿತ್ತು.

English summary
Former MLA Vinay Kulkarni has been granted bail in the murder case of Dharawad Zilla Panchayat BJP member Yogesh Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X