ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಬೆಂಗಳೂರು, ಜನವರಿ 11: ನ್ಯಾಷನಲ್ ಕಾಲೇಜು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಯುವಕನೊಬ್ಬ ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆಯಿಂದಲೂ ಮೆಟ್ರೋ ನಿಲ್ದಾಣದಲ್ಲೇ ಓಡಾಡಿಕೊಂಡಿದ್ದ ಆದರೆ ಯಾರಿಗೂ ಆತನ ಮೇಲೆ ಅನುಮಾನ ಬಂದಿರಲಿಲ್ಲ ಆದರೆ ಏಕಾಏಕಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ..

Young boy commit suicide in Namma metro station

ಮೆಟ್ರೋ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ ಮೊದಲ ಘಟನೆ ಇದಾಗಿದೆ.ಆತ್ಮಹತ್ಯೆಗೆ ಯತ್ನಿಸಿದಯುವಕ ಪ್ಲಾಟ್‌ಫಾರಂ ನಲ್ಲಿ ಕೆಲ ಗಂಟೆಗಳಿಂದ ಕೂತಿದ್ದ ಯುವಕ, ಇದಕ್ಕೂ ಮುನ್ನ ಮೆಟ್ರೋ ಸಿಬ್ಬಂದಿ ಆತನನ್ನು ವಿಚಾರಿಸಿದಾಗ ಸಂಬಂಧಿಕರು ಬರುತ್ತಿದ್ದು, ಅದಕ್ಕೆ ಕಾಯುತ್ತಿದ್ದೇನೆ ಎಂದು ಹೇಳಿದ್ದ.

ಆದರೆ ಮೆಟ್ರೋ ರೈಲು ಬರುತ್ತಿದ್ದಂತೆ ಹಳಿಗೆ ಹಾರಿದ್ದಾನೆ, ಇದನ್ನು ನೋಡಿದ ಮೆಟ್ರೋ ಚಾಲಕ ಬ್ರೇಕ್ ಹಾಕಲು ಯತ್ನಿಸಿದರೂ ದುರ್ಘಟನೆ ಸಂಭವಿಸಿದೆ.
ಆತ ಎಲ್ಲಿಯವನು, ಆತನ ಹೆಸರು, ಆತ್ಮಹತ್ಯೆಗೆ ಕಾರಣವೇನು ಎನ್ನುವ ಮಾಹಿತಿ ಇನ್ನು ಲಭ್ಯವಾಗಬೇಕಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಧ್ಯಕ್ಕೆ ಈ ಮಾರ್ಗದಲ್ಲಿ ಕೆಲ ಸಮಯಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+