2 ವರ್ಷದ ಪ್ರೀತಿ ಎರಡೇ ನಿಮಿಷದಲ್ಲಿ ಯುವಕನ ಪ್ರಾಣವನ್ನೇ ಕಸಿಯಿತು
ಬೆಂಗಳೂರು, ಜನವರಿ 9 : ಹೊರಗಡೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊರಟ ಯುವಕ ಎರಡು ದಿನಗಳ ನಂತರ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. 2 ವರ್ಷಗಳ ಪ್ರೀತಿ 2 ನಿಮಿಷದಲ್ಲಿ ಯುವಕನ ಪ್ರಾಣ ಕಸಿದಿದೆ.
ರಹೀಂ ಮೃತ ದುರ್ದೈವಿ. ಜನವರಿ 7ರಂದು ಮನೆಯಿಂದ ಹೊರಗಡೆ ಹೋಗುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾನೆ. ಬಳಿಕ ಎರಡು ದಿನವಾದರೂ ಆತ ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ನಿರ್ಜನ ಪ್ರದೇಶದಲ್ಲಿ ಆತನ ಶವವಾಗಿ ಪತ್ತೆಯಾಗಿದ್ದಾನೆ. ತಾಯಿಯ ರೋದನೆ ಮುಗಿಲು ಮುಟ್ಟಿದೆ.
ರಹೀಂ ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿಗೆ ಅವರ ಪೋಷಕರು ಬೇರೊಬ್ಬ ಯುವಕನ ಜೊತೆ ವಿವಾಹ ನಿಶ್ಚಯ ಮಾಡಿದ್ದರು. ಇದರಿಂದ ರಹೀಂ ಸಾಕಷ್ಟು ನೊಂದಿದ್ದ.

ಕೊನೆಗೆ ಯುವತಿಯನ್ನು ಬಿಟ್ಟಿರಲಾರದೇ ರಹೀಂ ಪದೇ ಪದೇ ಆಕೆಗೆ ಫೋನ್ ಮಾಡಿ ಭೇಟಿಯಾಗಲು ಪ್ರಯತ್ನಿಸುತ್ತಿದ್ದ. ಇದರಿಂದ ಯುವತಿಯ ಸಂಬಂಧಿಕರೇ ನನ್ನ ಮಗನನ್ನು ಕೊಲೆ ಮಾಡಿಸಿದ್ದಾರೆ ಎಂದು ರಹೀಂ ಪೋಷಕರು ಆರೋಪ ಮಾಡಿದ್ದಾರೆ.
ರಹೀಂ ಬೆಂಗಳೂರು ಹೊರವಲಯದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಜಿ ಸೊಣ್ಣೇಹಳ್ಳಿ ನಿವಾಸಿಯಾಗಿದ್ದ. ಕೆಲವು ದಿನಗಳ ಹಿಂದಷ್ಟೇ ಹುಡುಗಿಯ ಪೋಷಕರು ಹಾಗೂ ಸಂಬಂಧಿಕರಿಗೆ ಈ ವಿಚಾರ ತಿಳಿದಿದೆ. ಹುಡುಗಿಯನ್ನು ಮಾತನಾಡಿಸಬಾರದು, ಭೇಟಿಯಾಗಬಾರದು ಎಂದು ಅವರು ಬೆದರಿಕೆ ಹಾಕಿದ್ದರು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications