ಬೆಂಗಳೂರು: ಫೋಟೋಶೂಟ್ ಬೇಡ ಎಂದ ಪೋಷಕರು, ಮನನೊಂದ ಯುವತಿ ಸಾವಿಗೆ ಶರಣು
ಬೆಂಗಳೂರು, ಜನವರಿ 01: ಫೋಟೋಶೂಟ್ಗೆ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೆ ಮನನೊಂದ ಯುವತಿ ಸಾವಿಗೆ ಶರಣಾದ ದುರಂತ ಘಟನೆ ಹೊಸ ವರ್ಷದ ಮೊದಲ ದಿನವೇ ಬೆಂಗಳೂರಿನಲ್ಲಿ ನಡೆದಿದೆ. ವರ್ಷಿಣಿ (21) ಆತ್ಮಹತ್ಯೆಗೆ ಶರಣಾಗಿರುವ ಯುವತಿ.
ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಯುವತಿ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಓದುತ್ತಿದ್ದಳು. ಹೊಸ ವರ್ಷದ ದಿನವೇ ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಮೃತ ವರ್ಷಿಣಿ ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದಳು. ಇನ್ನು ಆಕೆಗೂ ಫೋಟೋ ಶೂಟ್ ಎಂದರೆ ಅಚ್ಚುಮೆಚ್ಚಾಗಿತ್ತು. ಮೊಬೈಲ್‌ನಲ್ಲೇ ಫೋಟೋಗಳನ್ನು ತೆಗೆಯುವುದು, ರೀಲ್ಸ್ ವಿಡಿಯೋಗಳನ್ನು ಮಾಡುತ್ತಿದ್ದಳು. ನಿನ್ನೆ ವರ್ಷಾಂತ್ಯ ಆಚರಣೆ ಜೊತೆಗೆ ವರ್ಷಿಣಿ ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ಸಿದ್ಧಳಾಗಿದ್ದಳು.
ಆದರೆ ಪೋಷಕರು ಮಾಲ್ಗೆ ಹೋಗಬೇಡ, ಫೋಟೋ ಶೂಟ್ ಎಂದು ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ. ಇಷ್ಟಕ್ಕೆ ಮನನೊಂದ ಯುವತಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಘಟನೆ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವತಿ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಲ್ಸನ್ ಗಾರ್ಡನ್ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಹೊಸವರ್ಷದ ದಿನವೇ ಬೆಂಗಳೂರಿನಲ್ಲಿ ಭೀಕರ ಹತ್ಯೆ
ಹೊಸ ವರ್ಷದ ದಿನವೇ ಬೆಂಗಳೂರಿನಲ್ಲಿ ಭೀಕರ ಹತ್ಯೆ ನಡೆದಿದ್ದು, ಯುವಕನನ್ನು ಸ್ನೇಹಿತರೇ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವಿಜಯ(21) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.
ವಿಜಯ್ ನಿನ್ನೆ ತನ್ನ ಗೆಳೆಯರ ಜೊತೆ ಹೊಸ ವರ್ಷ ಆಚರಣೆಗೆ ಬಂದಿದ್ದ. ಯುವಕರು ರಾತ್ರಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಿ ಮದ್ಯ ಸೇವಿಸಿದ್ದಾರೆ. ಮನೆಗೆ ಹೋಗುವಾಗ ವಿಜಯ್ ಹಾಗೂ ಗೆಳೆಯರ ಮಧ್ಯೆ ಜಗಳ ಆರಂಭವಾಗಿತ್ತು. ಆಟೋದಲ್ಲಿ ತೆರಳುವಾಗ ಜಗಳ ಹೆಚ್ಚಾಗಿದ್ದು, ಜೊತೆಯಲ್ಲಿದ್ದ ಯುವಕ ವಿಜಯ್ ಎದೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.
ಇನ್ನು ಆಟೋದಲ್ಲಿ ವಿಜಯ್ ಸಾವು ಬದುಕಿನ ಮಧ್ಯೆ ಹೋರಾಡುವಾಗ ಆರೋಪಿಗಳು ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ಬಿಸಾಕಿ ಪರಾರಿಯಾಗಿದ್ದಾರೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ವಿಜಯ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇಂದು ಬೆಳಗ್ಗೆ ವಿಜಯ್ ಮೃತದೇಹ ಕಂಡ ಸ್ಥಳೀಯರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹನುಮಂತ ನಗರ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications