ಬೆಂಗಳೂರು : ಕಬ್ಬನ್ ಪಾರ್ಕ್‌ನಲ್ಲಿ ಯುವತಿಯ ಶವ ಪತ್ತೆ
ಬೆಂಗಳೂರು, ಆಗಸ್ಟ್ 19 : ಕಬ್ಬನ್ ಪಾರ್ಕ್‌ನಲ್ಲಿ ಯುವತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತಪಟ್ಟ ಯುವತಿಯನ್ನು 18 ವರ್ಷದ ಸಂತೋಷಿ ಥಾಪಾ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಪಾರ್ಕ್‌ಗೆ ಬಂದ ಸಂತೋಷಿ ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಬೆಳಗ್ಗೆ ಉದ್ಯಾನವನದ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿ, ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ನೇಪಾಳ ಮೂಲದವಳು ಎಂದು ತಿಳಿದುಬಂದಿದೆ.
ಮದುವೆಗೆ ಒಪ್ಪಿಲ್ಲ ಎಂದು ಆತ್ಮಹತ್ಯೆ : ಆತ್ಮಹತ್ಯೆ ಮಾಡಿಕೊಂಡ ನೇಪಾಳ ಮೂಲದ ಸಂತೋಷಿ ಥಾಪಾ ನರೇಶ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದರು.
ಒಟ್ಟಿಗೆ ಇಬ್ಬರು ಡಿಸೋಜಾ ಲೇಔಟ್‌ನಲ್ಲಿ ವಾಸವಾಗಿದ್ದರು. ಪ್ರಿಯಕರ ನರೇಶ್ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಸಂತೋಷಿ ಥಾಪಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹಿನ್ನಲೆಯಲ್ಲಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನರೇಶ್‌ನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications