ಮೆಟ್ರೋದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆದಿದ್ದ ವಿಕೃತ ಕೊನೆಗೂ ಬಂಧನ

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್‌ ಮೀಡಿಯಾ ಪೇಜ್‌ಗಳಲ್ಲಿ ಪೋಸ್ಟ್‌ ಮಾಡಿರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇನ್‌ಸ್ಟಾಗ್ರಾಂನಲ್ಲಿ ಮೆಟ್ರೋ ಕ್ಲಿಕ್ಸ್‌ ಎಂಬ ಪೇಜ್‌ ತೆರೆದು ಅದರಲ್ಲಿ ಮಹಿಳಾ ಪ್ರಯಾಣಿಕರ ಫೋಟೋ, ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗಿತ್ತು. ಈ ಬಗ್ಗೆ ಮಹಿಳಾ ಪ್ರಯಾಣಿಕರು ಶಾಕ್‌ಗೆ ಒಳಗಾಗಿದ್ದರು. ಪೊಲೀಸರು ಈ ಪ್ರಕರಣ ಕೈಗೆತ್ತಿಕೊಂಡು ಆ ವಿಕೃತನನ್ನು ಕೊನೆಗೂ ಜೈಲಿಗಟ್ಟಿದ್ದಾರೆ.

ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಯುವತಿಯರು ಹಾಗೂ ಮಹಿಳೆಯರ ಖಾಸಗಿ ಭಾಗಗಳು ಕಾಣುವಂತೆ ಫೋಟೋ ಹಾಗೂ ವಿಡಿಯೋ ರೆಕಾರ್ಡ್‌ ಮಾಡಿ ಅವುಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದ. ಮೆಟ್ರೋ ಚಿಕ್ಸ್‌ ಎಂಬ ಖಾತೆಯಿಂದ ಸುಮಾರು 13ಕ್ಕೂ ಹೆಚ್ಚು ವಿಡಿಯೋ ಅಪ್‌ಲೋಡ್‌ ಮಾಡಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಸಂಬಂಧ ಬನಶಂಕರಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ತಕ್ಷಣವೇ ಆ ಪೇಜ್‌ನಲ್ಲಿದ್ದ ವಿಡಿಯೋಗಳನ್ನು ಆತ ಡಿಲೀಟ್‌ ಮಾಡಿದ್ದ.

Youth Arrested For Secretly Filming Women On Bengaluru Namma Metro Uploading On Instagram

ವಿಕೃತ ಕಾಮಿಯನ್ನು ಬೆನ್ನತ್ತಿದ್ದ ಪೊಲೀಸರಿಗೆ ಆತ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿ ದಿಗಂತ್ ಎಂಬ ಯುವಕ ಎಂದು ತಿಳಿದುಬಂದಿದೆ. ಬನಶಂಕರಿ ಪೊಲೀಸರು ಸದ್ಯ ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ದಿಗಂತ್‌ ಹಾಸನದ ಜಿಲ್ಲೆಯ ಹೊಳೆನರಸೀಪುರದ ಮೂಲದವನು ಎಂದು ತಿಳಿದುಬಂದಿದೆ. ಈತನನ್ನು ಪೀಣ್ಯ ಬಳಿ ಅರೆಸ್ಟ್‌ ಮಾಡಿದ್ದಾರೆ.

ಮೆಟ್ರೋದಲ್ಲಿ ಯುವತಿಯರ ವಿಡಿಯೋ ರೆಕಾರ್ಡ್‌ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದೇವೆ. ಮೆಟ್ರೋದಲ್ಲಿ ವಿಡಿಯೋ ಮಾಡಿಕೊಂಡ ಬಳಿಕ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಹೇಳಿದ್ದಾರೆ.

Youth Arrested For Secretly Filming Women On Bengaluru Namma Metro Uploading On Instagram

ಬಂಧಿತ ಆರೋಪಿಯು ಹಾಸ‌ನ ಜಿಲ್ಲೆಯ ಹೊಳೆನರಸೀಪುರದವನು. ಈತ ಬೆಂಗಳೂರಿನ ತಿಗಳರ ಪಾಳ್ಯದಲ್ಲಿ ವಾಸವಿದ್ದ. ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡ್ತಿದ್ದ ಈ ಯುವಕ ಪ್ರತಿದಿನ ತಿಗಳರ ಪಾಳ್ಯದಿಂದ ಮುರುಗೇಶ್ ಪಾಳ್ಯ ನಡುವೆ ಮೇಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಕೃತ್ಯ ಎಸಗಿದ್ದಾನೆ ಎಂದು ವಿವರಿಸಿದ್ದಾರೆ.

ʼಬೆಂಗಳೂರು ಮೆಟ್ರೋ ಕ್ಲಿಕ್ಸ್‌ʼ ಹಾಗೂ ಮೆಟ್ರೋ ಚಿಕ್ಸ್‌ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್‌ ತೆರೆದು ಅದರಲ್ಲಿ 13ಕ್ಕೂ ಹೆಚ್ಚು ಅಸಭ್ಯವಾದ ಫೋಟೋ, ವಿಡಿಯೋಗಳನ್ನು ಪೋಸ್ಟ್‌ ಮಾಡಿದ್ದ. ಸುಮಾರು 5,300ಕ್ಕೂ ಹೆಚ್ಚು ಮಂದಿ ಈ ಪೇಜ್‌ ಫಾಲೋ ಆಗಿದ್ದರು. ಇದರಲ್ಲಿ ಯುವತಿಯರು ಹಾಗೂ ಮಹಿಳೆಯರು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರಿಗೆ ಗೊತ್ತಿಲ್ಲದಂತೆ ರಹಸ್ಯವಾಗಿ ಖಾಸಗಿ ಅಂಗಗಳು, ಅಶ್ಲೀಲವಾಗಿ ಫೋಟೋ ಹಾಗೂ ವಿಡಿಯೋಗಳನ್ನು ರೆಕಾರ್ಡ್‌ ಮಾಡಿಕೊಂಡು ಪೋಸ್ಟ್‌ ಮಾಡಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ಈ ನೀಚ ಕೃತ್ಯ ಎಸಗಿದ ವ್ಯಕ್ತಿಯನ್ನು ಬಂಧಿಸುವಂತೆ ಮೆಟ್ರೋ ಪ್ರಯಾಣಿಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದರು.

ಆ ಪೇಜ್‌ನ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡು ಬೆಂಗಳೂರು ಪೊಲೀಸರಿಗೆ ಟ್ಯಾಗ್‌ ಮಾಡಿದ್ದರು. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಆ ಪೇಜ್‌ ರಿಪೋರ್ಟ್‌ ಕೂಡ ಮಾಡಿದ್ದರು. ಅಲ್ಲಿದ್ದ ವಿಡಿಯೋಗಳು ಸಹ ಡಿಲೀಟ್‌ ಆಗಿದ್ದವು. ಕೊನೆಗೂ ಆ ವಿಕೃತ ಯುವಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಮೆಟ್ರೋ ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+