ಬೈಕ್‌ನಲ್ಲಿ ತೆರಳುವಾಗ ಮರ ಬಿದ್ದು ವಿದ್ಯಾರ್ಥಿ ಸಾವು

ಬೆಂಗಳೂರು, ಮಾರ್ಚ್ 4: ಬೈಕಿನಲ್ಲಿ ಹೋಗುತ್ತಿದ್ದವರ ಮೇಲೆ ಮರ ಬಿದ್ದು ಪಿಯುಸಿ ವಿದ್ಯಾರ್ಥಿ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕದಿರೇನಹಳ್ಳಿಯಲ್ಲಿ ನಡೆದಿದೆ.

ಇಲಿಯಾಸ್ ನಗರ ನಿವಾಸಿ ಮೊಹಮ್ಮದ್ ಉಮೈದ್ (17) ಮೃತ ವಿದ್ಯಾರ್ಥಿ, ಹಿಂಬದಿ ಸವಾರ ಮೊಹಮ್ಮದ್ ತಾಹೀರ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೃತ ಮೊಹಮ್ಮದ್ ಉಮೈದ್ ಮತ್ತು ಮೊಹಮ್ಮದ್ ಇಬ್ಬರು ಸ್ನೇಹಿತರಾಗಿದ್ದಾರೆ. ಇಬ್ಬರು ದ್ವಿಚಕ್ರ ವಾಹನದಲ್ಲಿ ಕುಮಾರಸ್ವಾಮಿ ಲೇಔಟ್‌ನ ದೇವೇಗೌಡ ಪೆಟ್ರೋಲ್ ಬಂಕ್ ಕಡೆಯಿಂದ ಮನೆಗೆ ಹೋಗುತ್ತಿದ್ದರು.

Youth killed, friend injured as tree falls on scooter

ಈ ವೇಳೆ ಮಾರ್ಗ ಮಧ್ಯೆ ಕದಿರೇನಹಳ್ಳಿ ಹೊರ ವರ್ತುಲ ರಸ್ತೆ ಬದಿ ಇದ್ದ ಮರ ದ್ವಿಚಕ್ರ ವಾಹನದ ಮೇಲೆ ಬಿದ್ದಿದೆ ಗಂಭೀರವಾಗಿ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಸ್ಥಳೀಯರು ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+