ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಬೆಂಗಳೂರು, ಅಕ್ಟೋಬರ್ 20 : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದು, ಸೋಮವಾರ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

Zameer Ahmed Khan Admitted To Hospital

ಚಿಕಿತ್ಸೆಗೆ ಜಮೀರ್ ಅಹಮದ್ ಖಾನ್ ಸ್ಪಂದಿಸುತ್ತಿದ್ದು ಸೋಮವಾರ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರು ನೂರಾರು ಬೆಂಬಲಿಗರು ಆಸ್ಪತ್ರೆಯತ್ತ ಬರುತ್ತಿದ್ದು, ಯಾರಿಗೂ ಭೇಟಿಗೂ ಅವಕಾಶ ನೀಡಿಲ್ಲ.

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಜಮೀರ್ ಅಹಮದ್ ಖಾನ್‌ಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಮೊದಲು ಜೆಡಿಎಸ್‌ನಲ್ಲಿದ್ದ ಜಮೀರ್ ಅಹಮದ್ ಖಾನ್ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರು. 2018ರ ವಿಧಾನಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಜಯಗಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಆಹಾರ ಸಚಿವರಾಗಿದ್ದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಜಮೀರ್ ಅಹಮದ್ ಖಾನ್ ಆಪ್ತರಾಗಿದ್ದಾರೆ. ಬಹುಕೋಟಿ ರೂಪಾಯಿ ಐಎಂಎ ಹಗರಣದಲ್ಲಿ ಕೆಲವು ದಿನಗಳ ಹಿಂದೆ ಸಿಬಿಐ ವಿಚಾರಣೆಯನ್ನು ಎದುರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+