ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ: ಜಮೀರ್ ಬ್ಯಾಟಿಂಗ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 29: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಮುಖ್ಯಮಂತ್ರಿ ಹುದ್ದೆಗೆ ಯಾರು ಏರಬೇಕು ಎಂಬ ಚರ್ಚೆ ಜೋರಾಗಿ ನಡೆಯುತ್ತಿರುವುದು ಕಾಂಗ್ರೆಸ್‌ನಲ್ಲಿ. ಅನೇಕ ಮುಖಂಡರು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆ ನೀಡಿರುವುದು ಕಾಂಗ್ರೆಸ್‌ನಲ್ಲಿ ಈ ಚರ್ಚೆಯನ್ನು ಹುಟ್ಟುಹಾಕಿದೆ. ಈ ವೇಳೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎನ್ನುವುದು ರಾಜ್ಯದ ಜನರ ಅಭಿಪ್ರಾಯ, ಹಾಗೇ ನನ್ನ ಅಭಿಪ್ರಾಯ ಕೂಡ. ಮುಖ್ಯಮಂತ್ರಿ ಯಾರಾಗಬೇಕು ಎಂದು ನಮ್ಮ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತೆ. ಆದರೆ ಜನರ ಅಭಿಪ್ರಾಯವನ್ನು ಹೇಳಿದ ಮಾತ್ರಕ್ಕೆ ಅದು ಪಕ್ಷ ವಿರೋಧಿ ಚಟುವಟಿಕೆಯಾಗಲ್ಲ ಎಂದು ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಕ್ಕೆ ತಮ್ಮ ಬೆಂಬಲ ಇದೆ ಎಂದಿರುವ ಪಕ್ಷದ ಅನೇಕ ಮುಖಮಡರಿಗೆ ತಿರುಗೇಟು ನೀಡಿದ್ದಾರೆ.

'ನರೇಂದ್ರ ಮೋದಿ, ಯಡಿಯೂರಪ್ಪ ಏನು ಎಳೆ ಕಡಸುಗಳಾ?''ನರೇಂದ್ರ ಮೋದಿ, ಯಡಿಯೂರಪ್ಪ ಏನು ಎಳೆ ಕಡಸುಗಳಾ?'

ಇದರ ಜತೆಗೆ ಅವರು ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಬಿಜೆಪಿ ಪ್ರತಿಪಾದಿಸಿದ್ದರೂ, ಬಿಜೆಪಿಯೊಳಗಿನ ಬೆಳವಣಿಗೆಗಳನ್ನು ಗಮನಿಸಿದರೆ ಮತ್ತೊಮ್ಮೆ ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

 Zameer Ahmed Khan Bats For Siddaramaih As Congress CM Again

'ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಮುಗಿದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳು ಆಗಬಹುದು. ಬಿಜೆಪಿ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಮತ್ತೆ ವಿಧಾನಸಭಾ ಚುನಾವಣೆ ಎದುರಾದರೂ ಆಶ್ಚರ್ಯವಿಲ್ಲ ಎಂದೆನಿಸುತ್ತಿದೆ' ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಯಾರ್ರಿ ಅವನು ಮುನಿರತ್ನ? ನಮಗೆ ಗಾಡ್‌ಫಾದರ್‌ ಆಗೋದಕ್ಕೆ!ಯಾರ್ರಿ ಅವನು ಮುನಿರತ್ನ? ನಮಗೆ ಗಾಡ್‌ಫಾದರ್‌ ಆಗೋದಕ್ಕೆ!

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ? ಎಂದು ಸಿದ್ದರಾಮಯ್ಯ ಕೂಡ ಬುಧವಾರ ಹೇಳಿದ್ದರು.

English summary
MLA Zameer Ahmed Khan said, he wants to see Siddaramaiah as the CM of Karnataka again.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X