ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುತೂಹಲ ಮೂಡಿಸಿದ ಎಚ್ಡಿಕೆ-ಜಮೀರ್ ಅಹ್ಮದ್ ಭೇಟಿ

|
Google Oneindia Kannada News

Recommended Video

ಬೆಂಗಳೂರಿನಲ್ಲಿ ಎಚ್ ಡಿ ಕುಮಾರಸ್ವಾಮಿಯನ್ನ ಭೇಟಿ ಮಾಡಿದ ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಜೂನ್ 20: ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ರಂಜಾನ್ ನಿಮಿತ್ತ ಮೆಕ್ಕಾ ಯಾತ್ರೆಗೆ ತೆರಳಿದ್ದ ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್, ಕುಮಾರಸ್ವಾಮಿ ಅವರ ಪರವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೀಗ ಅವರನ್ನು ಭೇಟಿಯಾಗಿ ಸುಮಾರು ಅರ್ಧ ಗಂಟೆಗಳ ಕಾಲ ಮಾತನಾಡಿರುವುದು ಕಾಂಗ್ರೆಸ್ಸಿಗರಲ್ಲಿ ತಲ್ಲಣವೆಬ್ಬಿಸಿದೆ. ಆದರೆ ಜಮೀರ್ ಅವರು ಕುಮಾರಸ್ವಾಮಿಯವರೊಂದಿಗೆ ಯಾವ ವಿಷಯ ಚರ್ಚಿಸಿದ್ದಾರೆ ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಪ್ರತಿಭಟನಾ ಸ್ಥಳಕ್ಕೆ ಕುಮಾರಸ್ವಾಮಿ, ವಿದ್ಯಾರ್ಥಿಗಳ ಮುಷ್ಕರ ವಾಪಸ್ ಪ್ರತಿಭಟನಾ ಸ್ಥಳಕ್ಕೆ ಕುಮಾರಸ್ವಾಮಿ, ವಿದ್ಯಾರ್ಥಿಗಳ ಮುಷ್ಕರ ವಾಪಸ್

ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ನಲ್ಲಿದ್ದಾಗ ಎಚ್ ಡಿ ಕುಮಾರಸ್ವಾಮಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಕೆಲವು ಭಿನ್ನಾಭಪ್ರಾಯಗಳಿಂದಾಗಿ ಜೆಡಿಎಸ್ ತೊರೆದಿದ್ದ ಅವರು ಎಚ್ ಡಿ ಕುಮಾರಸ್ವಾಮಿ ಅವರಿಗೆ ತಲೆನೋವಾಗಿದ್ದರು. ನಂತರ ಕಾಂಗ್ರೆಸ್ಸಿಗೆ ಸೇರಿ ಜೆಡಿಎಸ್ ಗೆ ಸೆಡ್ಡು ಹೊಡೆದು ನಿಂತಿದ್ದರು.

Zameer Ahmed meets HD Kumaraswamy in Krishna, Bengaluru

ವಿಧಾನಸಭೆಯ ಚುನಾವಣೆಯ ನಂತರ ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬೆಂಬಲ ಘೋಷಿಸಿದ ಕಾರಣ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಇದರಿಂದ ಬಂಡಾಯ ಶಾಸಕರಿಗೆ ಕಸಿವಿಸಿಯಾದರೂ ಸದ್ಯಕ್ಕೆ ಒಡೆದುಹೋಗಿದ್ದ ಸಂಬಂಧಕ್ಕೆ ಮತ್ತೆ ತೇಪೆ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ. ಈ ಭೇಟಿಯೂ ಅದರದೇ ಒಂದು ಭಾಗ ಎನ್ನಲಾಗಿದೆ!

English summary
Congress leader and Chamaraj pet MLA Zameer Ahmed meets chief minister HD Kumaraswamy in his official residence Krishna in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X