ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ: ಜಮೀರ್ ಅಹ್ಮದ್

Recommended Video

      ಕುಮಾರಸ್ವಾಮಿ ಅವರ ಕುರಿತು ಜಮೀರ್ ಅಹ್ಮದ್ ಹೇಳಿದ್ದೇನು ? | Oneindia Kannada

      ಬೆಂಗಳೂರು, ಜೂನ್ 6: ಜೆಡಿಎಸ್‌ನಲ್ಲಿದ್ದಾಗ ಕುಮಾರಸ್ವಾಮಿ ಮತ್ತು ದೇವೇಗೌಡ ಅವರೊಂದಿಗೆ ಮನಸ್ತಾಪದಿಂದ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ. ಅವರ ಜತೆಗೂಡಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

      ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ ಕಾಂಗ್ರೆಸ್ ಶಾಸಕರ ಸಂಭಾವ್ಯ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಅವರ ಹೆಸರೂ ಇದೆ.

      'ನನಗೆ ಸಚಿವ ಸ್ಥಾನ ಖಚಿತ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದರೂ ಸಚಿವ ಸ್ಥಾನ ಸಿಗುತ್ತಿತ್ತು, ಜೆಡಿಎಸ್‌ನಲ್ಲಿ ಇದ್ದರೂ ಮಂತ್ರಿಯಾಗುತ್ತಿದ್ದೆ' ಎಂದು ಜಮೀರ್ ಹೇಳಿದ್ದಾರೆ.

      zameer ahmed said kumaraswamy is our cm

      ಕುಮಾರಸ್ವಾಮಿ ಅವರೊಂದಿಗಿನ ಹಿಂದಿನ ವೈಮನಸ್ಸಿನ ಕುರಿತು ಮಾತನಾಡದ ಅವರು, ಕುಮಾರಸ್ವಾಮಿ ಅವರು ನಮ್ಮ ಮುಖ್ಯಮಂತ್ರಿ. ಅವರ ಜತೆಗೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.

      ಜಮೀರ್ ಅಹ್ಮದ್ ಅವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ.

      ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವಾಗ ಜೆಡಿಎಸ್‌ನಲ್ಲಿ ಜಮೀರ್ ಅಹ್ಮದ್ ಸೇರಿದಂತೆ ಏಳು ಶಾಸಕರು ಪಕ್ಷದ ವರಿಷ್ಠರ ವಿರುದ್ಧ ಬಂಡಾಯ ಎದ್ದಿದ್ದರು. ದೇವೇಗೌಡರ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಭಿನ್ನಮತೀಯ ಶಾಸಕರು, ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+