• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬ್ಯಾಂಕ್ವೆಟ್ ಹಾಲ್‌ನಲ್ಲೇ ಟಿಪ್ಪು ಜಯಂತಿಗೆ ಸರ್ಕಾರ ನಿರ್ಧಾರ

|

ಬೆಂಗಳೂರು, ನವೆಂಬರ್ 8: ಟಿಪ್ಪು ಜಯಂತಿ ವಿವಾದ ತಾರಕ್ಕೇರಿರುವ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಮಾಡುವುದಕ್ಕಿಂತ ಭದ್ರತೆ ಇರುವ ವಿಧಾನಸೌಧದಲ್ಲಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ದೀಪಾವಳಿ ವಿಶೇಷ ಪುರವಣಿ

ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದು ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಟಿಪ್ಪು ಜಯಂತಿಗೆ ತೀವ್ರ ವಿರೋಧ ಇರುವುದರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಕಾಟಾಚಾರಕ್ಕೆ ಮಾಡಿ ಮುಗಿಸಲು ಸರ್ಕಾರ ಸಜ್ಜಾಗಿತ್ತು, 3 ವರ್ಷಗಳಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜಯಂತಿ ನಡೆಸಲು ಪ್ರಮುಖ ಪಾತ್ರ ವಹಿಸುತ್ತಿರುವ ಜಮೀರ್ ಈ ವರ್ಷವೂ ಅಲ್ಲೇ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜತೆ 2 ದಿನಗಳಿಂದ ಚರ್ಚಿಸಿರುವ ಜಮೀರ್ ವಿವಿಧ ಮುಖಂಡರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಟಿಪ್ಪು ಜಯಂತಿಗೆ ವಿರೋಧ : ನ.10ರಂದು ಕೊಡಗು ಬಂದ್‌ಗೆ ಕರೆ

ಮಂಗಳವಾರ ಡಿಸಿಎಂ ಪರಮೇಶ್ವರ ಅವರನ್ನು ಭೇಟಿ ಮಾಡಿ ವಿಧಾನಸೌಧದಲ್ಲೇ ಟಿಪ್ಪು ಜಯಂತಿ ಆಚರಿಸುವಂತೆ ಒತ್ತಡ ಹಾಕಿದ್ದರು. ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿದಾಗಲೂ ಜಮೀರ್ ಉಪಸ್ಥಿತರಿದ್ದು, ಈ ವಿಚಾರದಲ್ಲಿ ಈ ವಿಚಾರದ ಚರ್ಚೆಗಳು ನಡೆದಿವೆ. ಎಲ್ಲರೂ ರಾಜಕೀಯ ಕಾರಣಕ್ಕೆ ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಆದರೆ ಕದ್ದುಮುಚ್ಚಿ ಜಯಂತಿ ಮಾಡುವ ಅಗತ್ಯವಿಲ್ಲ ಎಂದು ಹಿರಿಯ ನಾಯಕರು ಸ್ಪಷ್ಟಪಡಿಸಿದ್ದಾರೆ.

ಟಿಪ್ಪು ಪರ ವಿರೋಧ ಆಚರಣೆಗೆ ಮಡಿಕೇರಿ ಸಜ್ಜಾಗಿದೆ

ಟಿಪ್ಪು ಪರ ವಿರೋಧ ಆಚರಣೆಗೆ ಮಡಿಕೇರಿ ಸಜ್ಜಾಗಿದೆ

ನವೆಂಬರ್ 10ರಂದು ಆಚರಿಲ್ಪಡುತ್ತಿರುವ ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಮತ್ತೊಂದೆಡೆ ಜಿಲ್ಲಾಡಳಿತ ಪೊಲೀಸ್ ಬಂದೋಬಸ್ತ್ ನಲ್ಲಿ ಟಿಪ್ಪು ಜಯಂತಿ ಆಚರಿಸಲು ಮುಂದಾಗಿದೆ.2015ರಲ್ಲಿ ನಡೆದ ಟಿಪ್ಪು ಜಯಂತಿಯ ಗಲಭೆ, ಸಾವು, ನೋವು ಎಲ್ಲವೂ ಇನ್ನೂ ಹಸಿರಾಗಿದ್ದು, ಮತ್ತೆ ಏನಾಗಿ ಬಿಡುತ್ತದೆಯೋ ಎಂಬ ಭಯ ಜಿಲ್ಲೆಯ ಜನರನ್ನು ಕಾಡತೊಡಗಿದೆ.

ಟಿಪ್ಪು ಜಯಂತಿ ಓಕೆ, ಆದರೆ ಪರ, ವಿರೋಧಿ ಮೆರವಣಿಗೆಗೆ ಅವಕಾಶವಿಲ್ಲ

ಟಿಪ್ಪು ಜಯಂತಿ, ನವೆಂಬರ್ 10ರಂದು ಕೊಡಗು ಬಂದ್

ಟಿಪ್ಪು ಜಯಂತಿ, ನವೆಂಬರ್ 10ರಂದು ಕೊಡಗು ಬಂದ್

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನವೆಂಬರ್ 10ರಂದು ಕೊಡಗು ಬಂದ್‌ಗೆ ಕರೆ ನೀಡಲಾಗಿದೆ. ಟಿಪ್ಪು ಜಯಂತಿ ಆಚರಣೆ ಮಾಡುವುದಾಗಿ ಕರ್ನಾಟಕ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಸೋಮವಾರಪೇಟೆ ಮತ್ತು ವಿರಾಜಪೇಟೆಯಲ್ಲಿ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.

ಟಿಪ್ಪು ಜಯಂತಿ: ಸಂಭವನೀಯ ಮುಜುಗರದಿಂದ ತಪ್ಪಿಸಿಕೊಂಡ ಸರಕಾರ

ಟಿಪ್ಪು ಜಯಂತಿ, ಪರ, ವಿರೋಧಿ ಮೆರವಣಿಗೆಗೆ ಅವಕಾಶವಿಲ್ಲ

ಟಿಪ್ಪು ಜಯಂತಿ, ಪರ, ವಿರೋಧಿ ಮೆರವಣಿಗೆಗೆ ಅವಕಾಶವಿಲ್ಲ

ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಅದರಿಂದ ಹಿಂದೆ ಅರಿಯುವ ಮಾತಿಲ್ಲ, ಸರ್ಕಾರ ಯಾವುದಕ್ಕೂ ಮಣಿಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಹೇಳಿದ್ದರು.ಪ್ಪು ಜಯಂತಿ ಆಚರಣೆಯನ್ನು ಮಾಡೇ ಮಾಡುತ್ತೇವೆ, ಇದರಿಂದ ಹಿಂದೆ ಸರಿಯುವ ಮಾತಿಲ್ಲ, ಯಾರೇ ಎಷ್ಟೇ ವಿರೋಧಿಸಿದರೂ ಆಚರಣೆ ನಿಲ್ಲುವುದಿಲ್ಲ, ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನಿಡಲಾಗಿದೆಯೇ ಹೊರತು ಟಿಪ್ಪು ಪರ ಹಾಗೂ ವಿರೋಧಿಗಳ ಮೆರವಣಿಗೆಗೆ ಅವಕಾಶವಿಲ್ಲ ಎಂದಿದ್ದಾರೆ.

ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ

ಶಾಂತಿ ಭಂಗ ಮಾಡಿದವರ ವಿರುದ್ಧ ಕ್ರಮ

ಶಾಂತಿ ಭಂಗ ಮಾಡಿದವರ ವಿರುದ್ಧ ಕ್ರಮ

ಶಾಂತಿಭಂಗ ಮಾಡಿದವರ ವಿರುದ್ಧ ಕ್ರಮ ಟಿಪ್ಪು ಜಯಂತಿ ಹೆಸರಲ್ಲಿ ಯಾರೇ ಶಾಂತಿಗೆ ಭಂಗ ಉಂಟುಮಾಡಲು ಯತ್ನಿಸಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. 2019ರ ಲೋಕಸಭಾ ಚುನಾವಣೆ ಲಾಭಕ್ಕಾಗಿ ಬಿಜೆಪಿಯವರು ಅನಗತ್ಯವಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸಿಯೇ ಆಚರಿಸುತ್ತದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿದೆ ಎಂದರು.

English summary
As minister Zameer Ahmed Khan had put pressure on CLP leader Siddaramaiah to celebrate Tippu jayanti at Banquet Hall in Vidhana Soudha, the state government has ensured the same. DCM Dr.Parameshwar clarified the event will be held at Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X