Zika Virus Guidelines: ಝಿಕಾ ವೈರಸ್‌ನಿಂದ ತಪ್ಪಿಸಿಕೊಳ್ಳೋದು ಹೇಗೆ?, ಆರೋಗ್ಯ ಇಲಾಖೆಯ ಮಾರ್ಗಸೂಚಿ ಗಮನಿಸಿ
Zika Virus Guidelines: ಬೆಂಗಳೂರು, ನವೆಂಬರ್, 02: ರಾಜ್ಯದಲ್ಲಿ ಈಗಾಗಲೇ ಕೋವಿಡ್‌ನಿಂದ ಜನರು ಬೇಸತ್ತು ಹೋಗಿದ್ದರು. ಮತ್ತೇ ಇದೀಗ ಝಿಕಾ ವೈರಸ್ ಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗಾದರೆ ರೋಗದ ಲಕ್ಷಣಗಳು ಏನು?, ಇದು ಹೇಗೆ ಹರಡುತ್ತದೆ? ಇದರಿಂದ ತಪ್ಪಿಸಿಕೊಳ್ಳುವುದು ಹೇಗೆ ಎನ್ನುವ ಅಂಶಗಳನ್ನು ಇಲ್ಲಿ ಗಮನಿಸಿ.
ರೋಗದ ಲಕ್ಷಣಗಳು
* ಕಣ್ಣು ಕೆಂಪಾಗುವಿಕೆ
* ತಲೆ ನೋವು
* ಜ್ವರ
* ಕೀಲುಗಳಲ್ಲಿ ನೋವು
* ಗಂಧೆಗಳು
* ಸ್ನಾಯುಗಳಲ್ಲಿ ನೋವು

ಝಿಕಾ ವೈರಸ್ ತಡೆಗಟ್ಟಲು ಏನು ಮಾಡಬೇಕು?
* ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಿ ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ.
* ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಹಾಗೂ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿ.
* ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಿ.
* ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಆದ್ದರಿಂದ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
* ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.
* ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.
ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕ ಮಾಡಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.












Click it and Unblock the Notifications